ಲೋಕಸಭೆ ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಗೆ ಬಿಗ್ ಶಾಕ್: ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಗುಜರಾತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಅರ್ಜುನ್ ಮೊದ್ವಾಡಿಯಾ

ಅಹಮದಾಬಾದ್: ಗುಜರಾತ್ ವಿಧಾನಸಭೆ ಶಾಸಕ ಸ್ಥಾನಕ್ಕೆ ಕಾಂಗ್ರೆಸ್ ನಾಯಕ ಅರ್ಜುನ್ ಮೊದ್ವಾಡಿಯಾ ರಾಜೀನಾಮೆ ನೀಡಿದ್ದು, ಬಿಜೆಪಿ ಸೇರುವ ಸಾಧ್ಯತೆ ಇದೆ

ಇತ್ತೀಚೆಗಷ್ಟೇ ಅವರು ಬಿಜೆಪಿಗೆ ಸೇರುತ್ತಾರೆ ಎಂಬ ಊಹಾಪೋಹಗಳ ನಡುವೆ ಗುಜರಾತ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಮತ್ತು ಹಿರಿಯ ನಾಯಕ ಅರ್ಜುನ್ ಮೊದ್ವಾಡಿಯಾ ಅವರು ಸೋಮವಾರ ರಾಜ್ಯ ವಿಧಾನಸಭೆಗೆ ರಾಜೀನಾಮೆ ನೀಡಿದ್ದಾರೆ. ಅವರು ತಮ್ಮ ರಾಜೀನಾಮೆಯನ್ನು ವಿಧಾನಸಭಾಧ್ಯಕ್ಷರಿಗೆ ಸಲ್ಲಿಸಿದರು. ಪೋರಬಂದರ್‌ನ ಶಾಸಕರಾಗಿರುವ ಅವರು ವಿಧಾನಸಭೆಯಲ್ಲಿ ವಿರೋಧ ಪಕ್ಷದ ನಾಯಕರೂ ಆಗಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೂ ಪತ್ರ ಬರೆದು ಪಕ್ಷಕ್ಕೆ ರಾಜೀನಾಮೆ ನೀಡುವುದಾಗಿ ತಿಳಿಸಿದ್ದಾರೆ. ಅವರು ಗ್ರ್ಯಾಂಡ್ ಓಲ್ಡ್ ಪಾರ್ಟಿಯೊಂದಿಗೆ ತಮ್ಮ ಸುಮಾರು ನಾಲ್ಕು ದಶಕಗಳ ಒಡನಾಟವನ್ನು ಕೊನೆಗೊಳಿಸಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಪತ್ರ ಬರೆದಿರುವ ಮೊದ್ವಾಡಿಯಾ, ರಾಮಮಂದಿರದಲ್ಲಿ ರಾಮಲಲ್ಲಾ ಅವರ ಪ್ರಾಣ ಪ್ರತಿಷ್ಠಾ ಸಮಾರಂಭದಿಂದ ದೂರ ಉಳಿದ ಪಕ್ಷದ ನಾಯಕತ್ವದ ನಿರ್ಧಾರದ ಬಗ್ಗೆ ಉಲ್ಲೇಖಿಸಿದ್ದಾರೆ. ತಮ್ಮ ಕ್ಷೇತ್ರದ ಜನರಿಗೆ ಕೊಡುಗೆ ನೀಡಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.

https://twitter.com/ANI/status/1764622819936071816

https://twitter.com/ANI/status/1764623173146780117

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read