BIG NEWS : ‘KSP’ ನೇಮಕಾತಿಗೆ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ : ಆ. 6 ಕ್ಕೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ಮುಂದೂಡಿಕೆ

ಬೆಂಗಳೂರು : ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ನೇಮಕಕ್ಕೆ ಆಗಸ್ಟ್ 6 ಕ್ಕೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ಮುಂದೂಡಿಕೆಯಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ರಾಜ್ಯ ಪೊಲೀಸ್ ಇಲಾಖೆಯ ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ ( ಸಿಎಆರ್/ಡಿಎಆರ್) 3,484 ಹುದ್ದೆಗಳ ನೇಮಕಾತಿಗೆ ಆಗಸ್ಟ್ 6 ರಂದು ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ಮುಂದೂಡಲಾಗಿದ್ದು, ಪರೀಕ್ಷೆ ನಡೆಸುವ ದಿನಾಂಕವನ್ನು ನಂತರ ಪ್ರಕಟಿಸಲಾಗುವುದು ಎಂದು ಪ್ರಕಟಣೆ ಹೊರಡಿಸಲಾಗಿದೆ.

ಒಟ್ಟು 75 ಸಾವಿರಕ್ಕೂ ಹೆಚ್ಚು ಅಭ್ಯರ್ಥಿಗಳು, ಸುಮಾರು 800 ಪರೀಕ್ಷಾ ಕೇಂದ್ರಗಳಲ್ಲಿ ಕುಳಿತು ಪರೀಕ್ಚೆ ಬರೆಯಲು ಸಿದ್ದತೆ ನಡೆಸಲಾಗಿತ್ತು, ಆದರೀಗ ಪರೀಕ್ಷೆ ಮುಂದೂಡಲಾಗಿದೆ. 2022 ರ ಸೆಪ್ಟೆಂಬರ್ ನಲ್ಲಿ ಈ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿತ್ತು, ಕಾನ್ಸ್ ಟೇಬಲ್ ನೇಮಕಾತಿಗೆ ಮೊದಲು ಲಿಖಿತ ಪರೀಕ್ಷೆ ನಡೆಸಿ ನಂತರ ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ದೇಹದಾರ್ಡ್ಯತೆ ಮತ್ತು ಸಹಿಷ್ಣುತೆ ಪರೀಕ್ಷೆಗೆ ಆಹ್ವಾನಿಸಲಾಗುತ್ತದೆ. ಇದೀಗ ಆಗಸ್ಟ್ 6 ಕ್ಕೆ ನಿಗದಿಯಾಗಿದ್ದ ಲಿಖಿತ ಪರೀಕ್ಷೆ ಮುಂದೂಡಿಕೆಯಾಗಿದೆ

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read