HomeKarnatakaಜ.28ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ : ಅಭ್ಯರ್ಥಿಗಳು ತಪ್ಪದೇ ಪಾಲಿಸಬೇಕು ಈ ನಿಯಮಗಳು!

ಜ.28ರಂದು ಸಶಸ್ತ್ರ ಪೊಲೀಸ್ ಕಾನ್ಸ್ಟೇಬಲ್ ಲಿಖಿತ ಪರೀಕ್ಷೆ : ಅಭ್ಯರ್ಥಿಗಳು ತಪ್ಪದೇ ಪಾಲಿಸಬೇಕು ಈ ನಿಯಮಗಳು!

ಬೆಂಗಳೂರು : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ಸಶಸ್ತ್ರ ಪೊಲೀಸ್ ಕಾನ್ಸ್‍ಟೇಬಲ್ (ಸಿಎಆರ್/ಡಿಎಆರ್) (ಪುರುಷ & ತೃತೀಯ ಲಿಂಗ ಪುರುಷ)-3064 ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ಇದೇ ಜನವರಿ 28ರಂದು ಬೆಳಿಗ್ಗೆ 11 ರಿಂದ 12.30 ರವರೆಗೆ ರಾಜ್ಯಾದ್ಯಂತ ನಡೆಸಲಾಗುವುದು. ಲಿಖಿತ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕಡ್ಡಾಯವಾಗಿ ವಸ್ತ್ರಸಂಹಿತೆ ಪಾಲಿಸಬೇಕು.

ವಸ್ತ್ರಸಂಹಿತೆ: ಪುರುಷ ಮತ್ತು ತೃತೀಯ ಲಿಂಗ ಪುರುಷ ಅಭ್ಯರ್ಥಿಗಳು ಅರ್ಧ ತೋಳಿನ ಶರ್ಟ್‍ಗಳನ್ನು ಕಡ್ಡಾಯವಾಗಿ ಧರಿಸುವುದು ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಶರ್ಟ್‍ಗಳನ್ನು ಧರಿಸುವುದು, ಜಿಪ್ ಪ್ಯಾಕೆಟ್‍ಗಳು, ದೊಡ್ಡ ಬಟನ್‍ಗಳು ಇರುವ ಶರ್ಟ್‍ಗಳನ್ನು ಧರಿಸತಕ್ಕದ್ದಲ್ಲ.  ಜೀನ್ಸ್ ಪ್ಯಾಂಟ್ ಮತ್ತು ಹೆಚ್ಚಿನ ಜೇಬುಗಳಿರುವ ಪ್ಯಾಂಟ್‍ಗಳನ್ನು ಧರಿಸತಕ್ಕದ್ದಲ್ಲ. ಪರೀಕ್ಷಾ ಕೇಂದ್ರದೊಳಗೆ ಷೂಗಳನ್ನು ನಿಷೇಧಿಸಲಾಗಿದ್ದು, ಅಭ್ಯರ್ಥಿಗಳು ತೆಳುವಾದ ಅಡಿಭಾಗವಿರುವ ಪಾದರಕ್ಷೆಗಳನ್ನು (ಚಪ್ಪಲಿ) ಧರಿಸುವುದು. ಕುತ್ತಿಗೆ ಸುತ್ತಾ ಯಾವುದೇ ಲೋಹದ ಅಭರಣಗಳು ಅಥವಾ ಉಂಗುರ ಮತ್ತು ಕಡಗಳನ್ನು ಧರಿಸುವುದು ನಿಷೇಧಿಸಲಾಗಿದೆ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular