HomeKarnatakaಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್: ಜೂ. 27ರಿಂದ 6 ದಿನ ಅಗ್ನಿವೀರ್ ನೇಮಕ ರ್ಯಾಲಿ

ಸೇನೆ ಸೇರಬಯಸುವ ಯುವಕರಿಗೆ ಗುಡ್ ನ್ಯೂಸ್: ಜೂ. 27ರಿಂದ 6 ದಿನ ಅಗ್ನಿವೀರ್ ನೇಮಕ ರ್ಯಾಲಿ

ಬೆಂಗಳೂರು: ಬೆಂಗಳೂರಿನ ಸೇನಾ ನೇಮಕಾತಿ ಕಚೇರಿಯು ಜೂನ್ 27ರಿಂದ ಜುಲೈ 2ರವರೆಗೆ ಆರು ದಿನಗಳ ಕಾಲ ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಅಗ್ನಿವೀರ್ ನೇಮಕಾತಿ ರ್ಯಾಲಿ ಆಯೋಜಿಸಿದೆ.

2024ರ ಏಪ್ರಿಲ್ 22 ರಿಂದ ಮೇ 7ರವರೆಗೆ ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್ ಆಫೀಸರ್, ಅಸಿಸ್ಟೆಂಟ್, ಸ್ಟೋರ್ ಕೀಪರ್, ಟೆಕ್ನಿಕಲ್, ಅಗ್ನಿವೀರ್ ಟ್ರೇಡ್ಸ್ ಮೆನ್ ಹುದ್ದೆಗಳ ಭರ್ತಿಗೆ ಸೇನಾ ನೇಮಕಾತಿ ಸಾಮಾನ್ಯ ಪರೀಕ್ಷೆ ನಡೆಸಲಾಗಿತ್ತು.

ರಾಜ್ಯದ ವಿವಿಧ ಜಿಲ್ಲೆಗಳಿಂದ ಆಯ್ಕೆಯಾದ ಪುರುಷ ಅಭ್ಯರ್ಥಿಗಳು ಮಾತ್ರ ರ್ಯಾಲಿಯಲ್ಲಿ ಭಾಗವಹಿಸಬೇಕು. ಅಭ್ಯರ್ಥಿಗಳಿಗೆ ವಸತಿ ವ್ಯವಸ್ಥೆ ಮಾಡಲಾಗಿದ್ದು, ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಇ-ಮೇಲ್ ಮೂಲಕ ಪ್ರವೇಶ ಪತ್ರ ಒದಗಿಸಲಾಗಿದೆ. joinindianarmy ವೆಬ್ಸೈಟ್ ನಲ್ಲಿಯೂ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಳ್ಳಬಹುದಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular