HomeKarnatakaಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಸೇನೆ ಸೇರುವ ನಿರೀಕ್ಷೆಯಲ್ಲಿದ್ದವರಿಗೆ ಇಲ್ಲಿದೆ ಗುಡ್ ನ್ಯೂಸ್

ಆರ್ಮಿ ರಿಕ್ರೂಟಿಂಗ್ ಆಫೀಸ್ ಬೆಳಗಾವಿ ಹಾಗೂ ಬೆಂಗಳೂರು ಹೆಡ್‌ಕ್ವಾಟರ್ ರಿಕ್ರೂಟಿಂಗ್ ಜೋನ್ ಬೆಂಗಳೂರು ಇವರ ಸಹಯೋಗದಲ್ಲಿ ಭೂಸೇನಾ ನೇಮಕಾತಿಗೆ ಅಗ್ನಿಪಥ ಆನ್‌ಲೈನ್ ರಿಜಿಸ್ಟ್ರೇಶನ್ ಆರಂಭಿಸಿದ್ದು, ಆಸಕ್ತರು ಏಪ್ರಿಲ್ 10 ರೊಳಗೆ ನೊಂದಾಯಿಸಿಕೊಳ್ಳಬೇಕು.

ಜಾಯಿನ್ ಇಂಡಿಯನ್ ಆರ್ಮಿ ವೆಬ್‌ಸೈಟ್ www.joinindianarmy.nic.in ನಲ್ಲಿ ರ‍್ಯಾಲಿ ಮೂಲಕ ಬೆಳಗಾವಿ, ಬೀದರ್, ಕಲುಬುರಗಿ, ಕೊಪ್ಪಳ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳ ಅಭ್ಯರ್ಥಿಗಳ ನೋಂದಣಿ ಮಾಡಿಕೊಳ್ಳಬಹುದಾಗಿದೆ.

ಅಗ್ನಿವೀರ್ ಜನರಲ್ ಡ್ಯೂಟಿ, ಅಗ್ನಿವೀರ್ ಟೆಕ್ನಿಕಲ್, ಅಗ್ನಿವೀರ್, ಟ್ರೇಡ್ಸ್ ಮನ್ ಗಳಿಗೆ 10ನೇ ತರಗತಿ ಉತ್ತೀರ್ಣರಾಗಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಗ್ನಿವೀರ್ ಟ್ರೇಡ್ಸ್ ಮನ್‌ಗೆ 8ನೇ ತರಗತಿ ಪಾಸ್ ಆಗಿರಬೇಕು. ಹಾಗೂ ಅಗ್ನಿವೀರ್ ಕ್ಲರ್ಕ್, ಸ್ಟೋರ್‌ಕೀಪರ್ ಟೆಕ್ನಿಕಲ್, ಈ ವರ್ಗಗಳಿಗೆ ಪ್ರವೇಶಕ್ಕೆ ಅವಕಾಶವಿದ್ದು, ವಯೋಮಾನ, ಶೈಕ್ಷಣಿಕ ಅರ್ಹತೆ ಮತ್ತು ಇತರೆ ಮಾಹಿತಿಗಾಗಿ 2025ರ ಮಾರ್ಚ್ 12 ರಂದು ಬೆಳಗಾವಿ ಆರ್ಮಿ ರಿಕ್ರೂಟಿಂಗ್ ಆಫೀಸ್‌ದಿಂದ ಹೊರಡಿಸಿದ ಅಧಿಸೂಚನೆ ವೀಕ್ಷಿಸಬಹುದಾಗಿದೆ ಎಂದು ಡೈರೆಕ್ಟರ್ ರಿಕ್ರೂಟಿಂಗ್ ಕರ್ನಲ್ ಎ.ಕೆ ಉಪಾಧ್ಯಾಯ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular