ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಆರ್ಮಿ ಸ್ಕೂಲ್ ಗಳಲ್ಲಿ 8000 ಕ್ಕೂ ಹೆಚ್ಚು ಬೋಧಕರ ಹುದ್ದೆ ನೇಮಕಾತಿಗೆ ಅರ್ಜಿ ಆಹ್ವಾನ

ಸೇನಾ ಸಿಬ್ಬಂದಿಗಳ ಮಕ್ಕಳ ಶಿಕ್ಷಣಕ್ಕಾಗಿರುವ ಆರ್ಮಿ ವೆಲ್ಫೇರ್ ಎಜುಕೇಶನ್ ಸೊಸೈಟಿಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸೈನಿಕ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ದೇಶಾದ್ಯಂತ ಒಟ್ಟು 139 ಆರ್ಮಿ ಸ್ಕೂಲ್ ಗಳಿದ್ದು, ಒಟ್ಟು 8,000ಕ್ಕೂ ಹೆಚ್ಚು ಶಿಕ್ಷಕರ ಹುದ್ದೆಗೆ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಹುದ್ದೆಗಳ ವಿವರ :
* ಪ್ರೈಮರಿ ಟೀಚರ್ ಹುದ್ದೆಗಳು
* ಪೋಸ್ಟ್ ಗ್ರಾಜುಯೇಟ್ ಶಿಕ್ಷಕರ ಹುದ್ದೆ
* ಟ್ರೈನಡ್ ಗ್ರಾಜುಯೇಟ್ ಟೀಚರ್

ಪ್ರೈಮರಿ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು ಸಂಬಂಧಪಟ್ಟ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮತ್ತು ಬಿಎಡ್ ಕೋರ್ಸ್ ನಲ್ಲಿ ಶೇಕಡ 50ರಷ್ಟು ಅಂಕಗಳೊಂದಿಗೆ ಪಾಸಾಗಿರಬೇಕು. ಇದರ ಜೊತೆಗೆ ಅಭ್ಯರ್ಥಿಗಳು ಸಿ ಟಿ ಇ ಟಿ ಅಥವಾ ಟಿಇಟಿ ಅರ್ಹತೆ ಹೊಂದಿರಬೇಕು.

ಪೋಸ್ಟ್ ಗ್ರಾಜುವೇಟ್ ಟೀಚರ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಸಂಬಂಧಪಟ್ಟ ವಿಷಯದಲ್ಲಿ ಪದವಿ ಶಿಕ್ಷಣದ ಜೊತೆಗೆ ಬಿಎಡ್ ಪದವಿ ಮುಗಿಸಿರಬೇಕು.

ಈ ನೇಮಕಾತಿಗೆ ಹೊಸದಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 40 ವರ್ಷದ ಒಳಗಿರಬೇಕು ಮತ್ತು ಸೇವಾನುಭವ ಹೊಂದಿರುವ ಅಭ್ಯರ್ಥಿಗಳು ಗರಿಷ್ಠ 57 ವರ್ಷದ ಒಳಗಿರಬೇಕು.

ನೇಮಕಾತಿ ಮಾಹಿತಿ:

ಅಭ್ಯರ್ಥಿಗಳಿಗೆ ಮೊದಲು ಆನ್ಲೈನ್ ಸ್ಕ್ರೀನಿಂಗ್ ಟೆಸ್ಟ್ ನಡೆಸಿ ಇದರಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳಿಗೆ ಸಂದರ್ಶನ ನಡೆಸಿ ನಂತರದಲ್ಲಿ ಬೋಧನಾ ಪರೀಕ್ಷೆ ನಡೆಸಲಾಗುತ್ತದೆ. ಉತ್ತಮ ಅಂಕ ಗಳಿಸಿದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ:

ಅರ್ಜಿ ಸಲ್ಲಿಸಲು ಅಕ್ಟೋಬರ್ 25, 2024 ಕೊನೆಯ ದಿನಾಂಕವಾಗಿದೆ. ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.

https://www.awesindia.com/ ಈ ವೆಬ್ ಸೈಟ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read