SHOCKING: ಗರ್ಭಿಣಿ ಮೇಲೆ ಅತ್ಯಾಚಾರ ಎಸಗಿ ಖಾಸಗಿ ಭಾಗ ಗಾಯಗೊಳಿಸಿದ ಯೋಧ ಅರೆಸ್ಟ್

ಇಂದೋರ್: ಮಧ್ಯಪ್ರದೇಶದ ಇಂದೋರ್‌ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಖಾಸಗಿ ಭಾಗ ಗಾಯಗೊಂಡಿಸಿದ ಸೇನೆಯ ವ್ಯಕ್ತಿಯನ್ನು ಬಂಧಿಸಲಾಗಿದೆ.

ಶುಕ್ರವಾರ ರಾತ್ರಿ ಇಂದೋರ್‌ನ ಹೋಟೆಲ್ ಕೊಠಡಿಯಲ್ಲಿ ಐದು ತಿಂಗಳ ಗರ್ಭಿಣಿ ಮಹಿಳಾ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ಸೇನಾಧಿಕಾರಿಯನ್ನು ಶನಿವಾರ ಬಂಧಿಸಲಾಗಿದೆ. ಬೆಳಿಗ್ಗೆ ಮಹಿಳಾ ಪೊಲೀಸ್ ಠಾಣೆಗೆ ಬಂದಾಗ ಮಹಿಳೆಗೆ ರಕ್ತಸ್ರಾವವಾಗಿತ್ತು. ಕಳೆದ ವರ್ಷದಿಂದ ಕಿರುಕುಳ ಮತ್ತು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಆರ್ಮಿ ಲ್ಯಾನ್ಸ್ ನಾಯಕ್ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ ಎಂದು ಅವಳು ಹೇಳಿಕೊಂಡಿದ್ದಾಳೆ ಎಂದು ಮಹಿಳಾ ಪೊಲೀಸ್ ಠಾಣೆ ಪ್ರಭಾರಿ ಕೌಶಲ್ಯ ಚೌಹಾಣ್ ಹೇಳಿದ್ದಾರೆ.

ಅವರು ‘ಡೇಟಿಂಗ್’ ನಡೆಸುತ್ತಿದ್ದರು. ಗರ್ಭಿಣಿಯಾಗಿದ್ದಾಗ ದೈಹಿಕ ಸಂಬಂಧ ಹೊಂದಿದ್ದರಿಂದ ರಕ್ತಸ್ರಾವವಾಗಲು ಪ್ರಾರಂಭಿಸಿದೆ ಎಂದು ಯೋಧ ಪೊಲೀಸ್ ಠಾಣೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ತಿಳಿಸಿದ್ದಾರೆ.

ಬ್ಯಾಂಕ್ ಅಧಿಕಾರಿಯೊಬ್ಬರ ಪತ್ನಿಯಾದ 35 ವರ್ಷದ ಮಹಿಳೆ ಒಂದು ವರ್ಷದ ಹಿಂದೆ ಮೊವ್ ಕಂಟೋನ್ಮೆಂಟ್‌ನಲ್ಲಿ ಕೆಲವು ವಸ್ತುಗಳನ್ನು ಖರೀದಿಸುವಾಗ ಆರೋಪಿ ಸಂಪರ್ಕಕ್ಕೆ ಬಂದಿದ್ದರು ಎಂದು ಚೌಹಾಣ್ ಹೇಳಿದ್ದಾರೆ.

ಅವನು ತನ್ನ ಮನೆಗೆ ಆಗಾಗ್ಗೆ ಬರಲು ಪ್ರಾರಂಭಿಸಿದ್ದ. ಅವಳು ವಾಶ್‌ರೂಮ್‌ನಲ್ಲಿದ್ದಾಗ ಮತ್ತು ಮನೆಯಲ್ಲಿ ಯಾರೂ ಇಲ್ಲದಿದ್ದಾಗ ತನ್ನ ಆಕ್ಷೇಪಾರ್ಹ ವೀಡಿಯೊವನ್ನು ಸಹ ಮಾಡಿದ್ದಾನೆ ಎಂದು ಅವರು ಆರೋಪಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ದೂರಿನ ಪ್ರಕಾರ ಆರೋಪಿ ಆಕೆಯನ್ನು ಬ್ಲಾಕ್ ಮೇಲ್ ಮಾಡಲು ಆರಂಭಿಸಿದ್ದ. ಇಂದೋರ್‌ ನ ಹೋಟೆಲ್‌ಗೆ ಬಂದು ಭೇಟಿಯಾಗುವಂತೆ ಒತ್ತಾಯಿಸಿದ್ದ. ಅವಳು ಬಂದಾಗ, ಅವನು ತುಂಬಾ ಕ್ರೂರವಾಗಿ ಅತ್ಯಾಚಾರವೆಸಗಿದ್ದಾನೆ. ಅವಳು ರಕ್ತಸ್ರಾವವಾಗಿ ಆಘಾತ ಮತ್ತು ನೋವಿನಿಂದ ಪೊಲೀಸರ ಸಹಾಯ ಕೇಳಿದ್ದಾಳೆ. ನಾವು ತಕ್ಷಣ ಹೋಟೆಲ್‌ಗೆ ಹೋಗಿ ಆರೋಪಿಯನ್ನು ಬಂಧಿಸಿದ್ದೇವೆ. ಕೊಠಡಿಯನ್ನು ಸೀಲ್ ಮಾಡಲಾಗಿದೆ ಎಂದು ಚೌಹಾಣ್ ಹೇಳಿದ್ದಾರೆ.

ಘಟನೆ ಬಗ್ಗೆ ಪೊಲೀಸರು ಎಲ್ಲಾ ಕೋನಗಳಲ್ಲಿ ತನಿಖೆ ನಡೆಸುತ್ತಿದ್ದಾರೆ ಎಂದು ಹೆಚ್ಚುವರಿ ಡಿಸಿಪಿ ಪ್ರಿಯಾಂಕಾ ದುಡ್ವೆ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read