ಸರ್ಕಾರಿ ನೌಕರರಿಗೆ ಮುಖ್ಯ ಮಾಹಿತಿ: ಆರೋಗ್ಯ ಸಂಜೀವಿನಿ ಯೋಜನೆ ನೋಂದಣಿಗೆ ಮನವಿ

ಬೆಂಗಳೂರು: ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ ಸೆಪ್ಟೆಂಬರ್ 15 ರಿಂದ ಜಾರಿ ಮಾಡಲು ಸರ್ಕಾರ ಸಿದ್ಧತೆ ಮಾಡಿಕೊಂಡಿದೆ.

ಈ ಯೋಜನೆಗೆ ಒಳಪಡುವ ಸರ್ಕಾರಿ ಅಧಿಕಾರಿಗಳು, ನೌಕರರು ಮತ್ತು ಕುಟುಂಬ ಸದಸ್ಯರ ಮಾಹಿತಿಯನ್ನು ನೋಂದಣಿ ಮಾಡಿಕೊಳ್ಳಲು ಸೆಪ್ಟೆಂಬರ್ 15 ಕೊನೆಯ ದಿನವಾಗಿದೆ. ಹೆಚ್.ಆರ್.ಎಂ.ಎಸ್. ತಂತ್ರಾಂಶ ಹಾಗೂ ಮೊಬೈಲ್ ಅಪ್ಲಿಕೇಶನ್ ನಲ್ಲಿ ನೋಂದಣಿ ಮಾಡಿಸಿಕೊಳ್ಳಲು ಮತ್ತೊಮ್ಮೆ ಅವಕಾಶ ಕಲ್ಪಿಸಲಾಗಿದೆ.

ಈ ಹಿಂದೆಯೇ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡುವ ಅಧಿಕಾರಿಗಳು, ನೌಕರರು ತಮ್ಮ ಇಲಾಖೆಯ ಡಿಡಿಒ ಮೂಲಕ ನೋಂದಣಿ ಮಾಡಿಸಿಕೊಳ್ಳಲು ತಿಳಿಸಲಾಗಿದೆ. ಈ ಹಿಂದೆಯೇ ತಿಳಿಸಿದ್ದರೂ ನಿರೀಕ್ಷಿತ ಮಟ್ಟದಲ್ಲಿ ನೋಂದಣಿ ಮಾಡಿಕೊಳ್ಳದ ಕಾರಣ ಯೋಜನೆ ಜಾರಿಗೆ ಅಡ್ಡಿಯಾಗಿದ್ದು, ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಹೊರಡಿಸಿದ ಸುತ್ತೋಲೆಯ ನಿರ್ದೇಶನದ ಪ್ರಕಾರ ಡಿಡಿಒಗಳನ್ನು ಸಂಪರ್ಕಿಸಿ ಹೆಚ್.ಆರ್.ಎಂ.ಎಸ್. ತಂತ್ರಾಂಶ(https://hrms.karnataka.gov.in) ಹಾಗೂ ಮೊಬೈಲ್ ಅಪ್ಲಿಕೇಶನ್(https://hrmsenroll.karnataka.gov.in) ಮೂಲಕ ಸೆಪ್ಟಂಬರ್ 15ರೊಳಗೆ ನೋಂದಾಯಿಸಿಕೊಳ್ಳುವಂತೆ ತಿಳಿಸಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read