ಸರ್ಕಾರಿ ನೌಕರರು, ಕುಟುಂಬ ಸದಸ್ಯರಿಗೆ ನಗದುರಹಿತ ಚಿಕಿತ್ಸೆ ಸೌಲಭ್ಯ; ಸರ್ಕಾರದ ಆದೇಶ

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಕುಟುಂಬ ಸದಸ್ಯರಿಗೆ ನಗದು ರಹಿತ ಚಿಕಿತ್ಸೆ ಸೌಲಭ್ಯ ಕಲ್ಪಿಸಿ ಸರ್ಕಾರ ಆದೇಶ ಹೊರಡಿಸಿದೆ.

ನೌಕರರು ಮತ್ತು ಅವರ ಕುಟುಂಬದ ಸದಸ್ಯರಿಗೆ ನಗದು ರಹಿತವಾಗಿ ಚಿಕಿತ್ಸೆ ಸೌಲಭ್ಯ ಕಲ್ಪಿಸುವ ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿ ರಾಜ್ಯ ಪತ್ರದಲ್ಲಿ ಪ್ರಕಟಿಸಿದೆ.

ಕರ್ನಾಟಕ ಸರ್ಕಾರಿ ನೌಕರರ ವೈದ್ಯಕೀಯ ಹಾಜರಾತಿ ನಿಯಮಗಳು 1963ರ ಅಡಿ ವೈದ್ಯಕೀಯ ಹಾಜರಾತಿಗೆ ಅರ್ಹರಾದ ರಾಜ್ಯ ಸರ್ಕಾರಿ ನೌಕರರು ಮತ್ತು ಅವರ ಅವಲಂಬಿತ ಸದಸ್ಯರು ಆರೋಗ್ಯ ಸಂಜೀವಿನಿ ಯೋಜನೆ ವ್ಯಾಪ್ತಿಗೆ ಒಳಪಡಲಿದ್ದಾರೆ.

ಹೈಕೋರ್ಟ್, ವಿಧಾನ ಮಂಡಲದ ನೌಕರರು, ಆರೋಗ್ಯ ಭಾಗ್ಯ ಯೋಜನೆ ಅಡಿ ಸೌಲಭ್ಯ ಪಡೆಯುತ್ತಿರುವ ಪೊಲೀಸ್ ಇಲಾಖೆ ಸಿಬ್ಬಂದಿ, ಕರ್ನಾಟಕ ನ್ಯಾಯಾಂಗ ಅಧಿಕಾರಿಗಳ ವೈದ್ಯಕೀಯ ಹಾಜರಾತಿ ನಿಯಮ ಅನ್ವಯ ವೈದ್ಯಕೀಯ ಸೌಲಭ್ಯ ಪಡೆಯುತ್ತಿರುವ ನ್ಯಾಯಾಂಗದ ಅಧಿಕಾರಿಗಳು, ಅಖಿಲ ಭಾರತ ಸೇವೆಗೆ ಸೇರಿದ ಅಧಿಕಾರಿಗಳು, ಸ್ಥಳೀಯ ಸಂಸ್ಥೆಗಳು, ವಿಶ್ವವಿದ್ಯಾಲಯಗಳು, ನಿಗಮ, ಮಂಡಳಿ, ಸಹಕಾರ ಸಂಸ್ಥೆಗಳ ನೌಕರರು, ಅನುದಾನಿತ ಶಿಕ್ಷಣ ಸಂಸ್ಥೆಗಳು ಹಾಗೂ ಇತರೆ ಸಂಸ್ಥೆಗಳ ನೌಕರರು ಯೋಜನೆ ವ್ಯಾಪ್ತಿಗೆ ಒಳಪಡುವುದಿಲ್ಲ ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read