HomeKarnatakaರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ರವೀಂದ್ರ ಕಲಾಕ್ಷೇತ್ರದಲ್ಲಿ ದ್ವಾರಕೀಶ್ ಅಂತಿಮ ದರ್ಶನಕ್ಕೆ ವ್ಯವಸ್ಥೆ: ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ

ಬೆಂಗಳೂರು: ಹೃದಯಾಘಾತದಿಂದ ನಿಧನರಾದ ಹಿರಿಯ ನಟ ದ್ವಾರಕೀಶ್ ಅವರ ಅಂತಿಮ ದರ್ಶನಕ್ಕೆ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ವ್ಯವಸ್ಥೆ ಮಾಡಲಾಗಿದೆ.

ಬೆಳಗ್ಗೆ ಅವರ ನಿವಾಸದಲ್ಲಿ ಫಾರ್ಥಿವ ಶರೀರಕ್ಕೆ ಅಂತಿಮ ವಿಧಿ ವಿಧಾನ ನೆರವೇರಿಸಿ ಪೂಜೆ ಸಲ್ಲಿಸಲಾಗುವುದು. ನಂತರ ಬೆಳಗ್ಗೆ 7:30 ರಿಂದ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರಕ್ಕೆ ಸ್ಥಳಾಂತರ ಮಾಡಲಾಗುವುದು. ಹುಸ್ಕೂರು ರಸ್ತೆ, ಎಲೆಕ್ಟ್ರಾನಿಕ್ ಸಿಟಿ ಫ್ಲೈ ಓವರ್ ಮೂಲಕ ಸೇಂಟ್ ಜಾನ್ಸ್ ಆಸ್ಪತ್ರೆ ಸರ್ಕಲ್, ಡೈರಿ ಸರ್ಕಲ್, ಮಿನರ್ವ ಸರ್ಕಲ್, ಜೆ.ಸಿ. ರೋಡ್ ಮೂಲಕ ರವೀಂದ್ರ ಕಲಾಕ್ಷೇತ್ರಕ್ಕೆ ಪಾರ್ಥಿವ ಶರೀರ ತಲುಪಲಿದೆ.

ರಾಜಕೀಯ, ಚಿತ್ರರಂಗದ ಗಣ್ಯರು ಅಂತಿಮ ದರ್ಶನ ಪಡೆಯಲಿದ್ದಾರೆ. ಅಭಿಮಾನಿಗಳು, ಕಲಾವಿದರು ಸಾರ್ವಜನಿಕರಿಗೆ ಅಂತಿಮ ದರ್ಶನ ಪಡೆಯಲು ವ್ಯವಸ್ಥೆ ಮಾಡಲಾಗಿದೆ. ನಂತರ ಬೆಂಗಳೂರಿನ ಚಾಮರಾಜಪೇಟೆ ರುದ್ರ ಭೂಮಿಯಲ್ಲಿ ಸರ್ಕಾರಿ ಗೌರವದೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular