HomeKarnatakaಚಿನ್ನ ವಂಚನೆ ಪ್ರಕರಣ: ಬಂಧಿತ ಐಶ್ವರ್ಯಾ ಗೌಡ ದಂಪತಿಗೆ 14 ದಿನ ನ್ಯಾಯಾಂಗ ಬಂಧನ, ನಟ...

ಚಿನ್ನ ವಂಚನೆ ಪ್ರಕರಣ: ಬಂಧಿತ ಐಶ್ವರ್ಯಾ ಗೌಡ ದಂಪತಿಗೆ 14 ದಿನ ನ್ಯಾಯಾಂಗ ಬಂಧನ, ನಟ ಧರ್ಮ ನಾಪತ್ತೆ

ಬೆಂಗಳೂರು: ವರಾಹಿ ಜ್ಯುವೆಲ್ಲರಿ ಶಾಪ್ ಮಾಲಕಿ ವನಿತಾ ಅವರಿಗೆ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಶ್ವರ್ಯಾ ಗೌಡ ಮತ್ತು ಆಕೆಯ ಪತಿ ಹರೀಶ್ ಗೌಡ ಅವರನ್ನು ಚಂದ್ರಾ ಲೇಔಟ್ ಠಾಣೆ ಪೊಲೀಸರು ಬಂಧಿಸಿ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದಾರೆ.

ಬೆಂಗಳೂರಿನ ಕೋರಮಂಗಲದ ಎನ್‌ಜಿವಿಯಲ್ಲಿರುವ ಜಡ್ಜ್ ನಿವಾಸದಲ್ಲಿ ಇಬ್ಬರನ್ನು ಹಾಜರುಪಡಿಸಲಾಗಿದ್ದು, ಇಬ್ಬರನ್ನು 14 ದಿನಗಳ ನ್ಯಾಯಾಂಗ ಬಂಧನಕ್ಕೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ. ಬಂಧಿತ ಐಶ್ವರ್ಯಾ ಗೌಡ ದಂಪತಿ ಪರಪ್ಪನ ಅಗ್ರಹಾರ ಜೈಲು ಪಾಲಾಗಿದ್ದಾರೆ.

ಆರೋಪಿಗಳನ್ನು ವಶಕ್ಕೆ ನೀಡುವಂತೆ ನ್ಯಾಯಾಲಯಕ್ಕೆ ಮನವಿ ಮಾಡಲು ಪೊಲೀಸರು ಸಿದ್ಧತೆ ನಡೆಸಿದ್ದಾರೆ. ಸೋಮವಾರ ಓಪನ್ ಕೋರ್ಟ್ ನಲ್ಲಿ ಈ ಬಗ್ಗೆ ಮನವಿ ಸಲ್ಲಿಸಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇನ್ನು ಪ್ರಕರಣದಲ್ಲಿ ನಟ ಧರ್ಮ ವಿರುದ್ಧವೂ ಕೇಸ್ ದಾಖಲಾಗಿದ್ದು, ಅವರು ನಾಪತ್ತೆಯಾಗಿದ್ದಾರೆ. ಅವರಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular