HomeKarnatakaBREAKING : ವಶಕ್ಕೆ ಪಡೆದ 'ಕಾವೇರಿ' ಹೋರಾಟಗಾರರನ್ನು ಬಿಡುಗಡೆ ಮಾಡಿ : ಮಾಜಿ ಸಿಎಂ HDK...

BREAKING : ವಶಕ್ಕೆ ಪಡೆದ ‘ಕಾವೇರಿ’ ಹೋರಾಟಗಾರರನ್ನು ಬಿಡುಗಡೆ ಮಾಡಿ : ಮಾಜಿ ಸಿಎಂ HDK ಆಗ್ರಹ

ಬೆಂಗಳೂರು : ವಶಕ್ಕೆ ಪಡೆದ ಕಾವೇರಿ ಹೋರಾಟಗಾರರನ್ನು ಪೊಲೀಸರು ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವುದನ್ನು ಖಂಡಿಸಿ ಕನ್ನಡಪರ ಸಂಘಟನೆಗಳು ಕರ್ನಾಟಕ ಬಂದ್ ಗೆ ಕರೆ ನೀಡಿದ್ದು, ವಿವಿಧೆಡೆಗಳಲ್ಲಿ ಕನ್ನಡಪರ ಸಂಘಟನೆಗಳು ಬೀದಿಗಿಳಿದು ಹೋರಾಟ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪ್ರತಿಭಟನೆ ನಡೆಸಿದ ಹೋರಾಟಗಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ಕೂಡಲೇ ಕಾವೇರಿ ಹೋರಾಟಗಾರರನ್ನು ಪೊಲೀಸರು ಬಿಡುಗಡೆ ಮಾಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ನಾಡು, ನುಡಿ, ನೆಲ, ಜಲದ ಪ್ರಶ್ನೆ ಬಂದಾಗ ಎಲ್ಲರೂ ಒಂದಾಗಬೇಕು. ಕಾಂಗ್ರೆಸ್ ಸರ್ಕಾರ ಕನ್ನಡ ಭಾವನೆಗಳನ್ನು ದಮನ ಮಾಡಬಾರದು. ಈಗಾಗಲೇ ವಶಕ್ಕೆ ಪಡೆದ ಹೋರಾಟಗಾರರನ್ನು ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular