HomeKarnatakaಭೂ ಅಕ್ರಮ ಒತ್ತುವರಿ ಆರೋಪ: ಆರ್ಟ್ ಆಫ್ ಲೀವಿಂಗ್ ವಿರುದ್ಧ SIT ತನಿಖೆಗೆ ಆದೇಶ

ಭೂ ಅಕ್ರಮ ಒತ್ತುವರಿ ಆರೋಪ: ಆರ್ಟ್ ಆಫ್ ಲೀವಿಂಗ್ ವಿರುದ್ಧ SIT ತನಿಖೆಗೆ ಆದೇಶ

ಬೆಂಗಳೂರು: ದಲಿತರ ಭೂಮಿಯನ್ನು ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿರೋ ಆರೋಪದ ಮೇಲೆ ಆರ್ಟ್ ಆಫ್ ಲೀವಿಂಗ್ ಸಂಸ್ಥೆ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ.

ಈ ಬಗ್ಗೆ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ ಪರಮೇಶ್ವರ್, ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಲಾಗಿದೆ. ರವಿಶಂಕರ್ ಗೂರೂಜಿ ಅವರ ನೇತೃತ್ವದ ಆರ್ಟ್ ಆಫ್ ಲೀವಿಂಗ್ ಸಂಸ್ಥೆಯವರು ದಲಿತರಿಗೆ ಸೇರಿದ 150 ಎಕರೆ ಜಾಗ ಅಕ್ರಮವಾಗಿ ಸ್ವಾಧೀನ ಮಾಡಿಕೊಂಡಿದ್ದಾರೆ ಅಂತ ದೂರು ಬಂದಿದೆ. ದಲಿತ ಸಂಘಟನೆಗಳು ಹಾಗೂ ಸಾರ್ವಜನಿಕರು ದೂರು ಕೊಟ್ಟಿದ್ದರು. ದೂರಿನ ಅನ್ವಯ ಈಗ ಎಸ್ಐಟಿ ರಚನೆ ಮಾಡಲಾಗಿದೆ. ಬೆಂಗಳೂರು ವಿಭಾಗ ಪ್ರಾದೇಶಿಕ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದ್ದು, ಅಕ್ರಮವಾಗಿದ್ದರೆ ಕ್ರಮ ಆಗುತ್ತದೆ ಎಂದು ತಿಳಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular