HomeLatest Newsಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಎರಡನೇ ಏಕದಿನ ಪಂದ್ಯ: ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ...

ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದು ಎರಡನೇ ಏಕದಿನ ಪಂದ್ಯ: ಸರಣಿ ಕೈವಶ ಮಾಡಿಕೊಳ್ಳುವ ತವಕದಲ್ಲಿ ಟೀಮ್ ಇಂಡಿಯಾ

ಇಂಗ್ಲೆಂಡ್ ಪ್ರವಾಸದಲ್ಲಿರುವ ಭಾರತ ಕ್ರಿಕೆಟ್ ತಂಡವು ಮೊದಲ ಪಂದ್ಯದಲ್ಲಿ ಭರ್ಜರಿ ಜಯ ಸಾಧಿಸಿದ ಬೆನ್ನಲ್ಲೇ, ಇದೀಗ ಎರಡನೇ ಏಕದಿನ ಪಂದ್ಯಕ್ಕೆ ಸಜ್ಜಾಗಿದೆ. ಕಾರ್ಡಿಫ್‌ನ ಸೋಫಿಯಾ ಗಾರ್ಡನ್ಸ್ ಕ್ರಿಕೆಟ್ ಮೈದಾನದಲ್ಲಿ ಇಂದು ಈ ಪ್ರಮುಖ ಪಂದ್ಯ ನಡೆಯಲಿದ್ದು, ಪ್ರವಾಸಿ ಭಾರತ ತಂಡವು ತನ್ನ ಗೆಲುವಿನ ಓಟವನ್ನು ಮುಂದುವರಿಸುವ ಇರಾದೆಯಲ್ಲಿದೆ. ಹ್ಯಾರಿ ಬ್ರೂಕ್ ನೇತೃತ್ವದ ಇಂಗ್ಲೆಂಡ್ ತಂಡಕ್ಕೆ ಈ ಪಂದ್ಯ ಸರಣಿಯಲ್ಲಿ ಜೀವಂತವಾಗಿರಲು ಅತ್ಯಂತ ಪ್ರಮುಖವಾಗಿದೆ.

ಮೊದಲ ಏಕದಿನ ಪಂದ್ಯದಲ್ಲಿ ಭಾರತ ತಂಡವು ಸಾಂಘಿಕ ಪ್ರದರ್ಶನದ ಮೂಲಕ 6 ವಿಕೆಟ್‌ಗಳ ಭರ್ಜರಿ ಜಯ ದಾಖಲಿಸಿತ್ತು. ಎಡ್ಜ್‌ಬಾಸ್ಟನ್‌ನ ಕಠಿಣ ಪಿಚ್‌ನಲ್ಲಿ ನಾಯಕ ಶುಭಮನ್ ಗಿಲ್ ಜವಾಬ್ದಾರಿಯುತ ಆಟವಾಡಿ 80 ರನ್ ಗಳಿಸಿ ತಂಡದ ಗೆಲುವಿಗೆ ಬುನಾದಿ ಹಾಕಿದ್ದರು. ಬೌಲಿಂಗ್‌ನಲ್ಲಿ ಪ್ರಸಿದ್ಧ್ ಕೃಷ್ಣ ಮತ್ತು ಗುರ್ನೂರ್ ಬ್ರಾರ್ ತಲಾ ಎರಡು ವಿಕೆಟ್ ಪಡೆದು ಮಿಂಚಿದರೆ, ಆಲ್‌ರೌಂಡರ್ ಅಕ್ಷರ್ ಪಟೇಲ್ 4 ವಿಕೆಟ್ ಹಾಗೂ ಅಜೇಯ 57 ರನ್ ಗಳಿಸಿ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದರು.

ಪಂದ್ಯದ ನೇರ ಪ್ರಸಾರ ಎಲ್ಲಿ ಮತ್ತು ಯಾವಾಗ?

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಭಾರತ ಮತ್ತು ಇಂಗ್ಲೆಂಡ್ ನಡುವಿನ ಈ ಎರಡನೇ ಏಕದಿನ ಪಂದ್ಯವು ಭಾರತೀಯ ಕಾಲಮಾನ ಸಾಯಂಕಾಲ 5:30 ಕ್ಕೆ ಆರಂಭವಾಗಲಿದ್ದು, 5:00 ಗಂಟೆಗೆ ಟಾಸ್ ಪ್ರಕ್ರಿಯೆ ನಡೆಯಲಿದೆ. ಭಾರತದಲ್ಲಿ ಈ ಪಂದ್ಯದ ನೇರ ಪ್ರಸಾರವನ್ನು ಸೋನಿ ಸ್ಪೋರ್ಟ್ಸ್ ನೆಟ್‌ವರ್ಕ್ ವಾಹಿನಿಗಳಲ್ಲಿ ವೀಕ್ಷಿಸಬಹುದಾಗಿದೆ. ಇನ್ನು ಡಿಜಿಟಲ್ ಮಾಧ್ಯಮದಲ್ಲಿ ಪಂದ್ಯವನ್ನು ವೀಕ್ಷಿಸಲು ಬಯಸುವವರು ಜಿಯೋಹಾಟ್‌ಸ್ಟಾರ್ ಆ್ಯಪ್ ಮತ್ತು ವೆಬ್‌ಸೈಟ್ ಮೂಲಕ ಲೈವ್ ಸ್ಟ್ರೀಮಿಂಗ್ ನೋಡಬಹುದು.

ಉಭಯ ತಂಡಗಳ ಬಲಾಬಲ ಹೀಗಿದೆ

ಭಾರತ ತಂಡ: ಶುಭಮನ್ ಗಿಲ್ (ನಾಯಕ), ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಅರ್ಷದೀಪ್ ಸಿಂಗ್, ಗುರ್ನೂರ್ ಬ್ರಾರ್, ಪ್ರಿನ್ಸ್ ಯಾದವ್, ಶಿವಂ ದುಬೆ, ಪ್ರಸಿದ್ಧ್ ಕೃಷ್ಣ.

ಇಂಗ್ಲೆಂಡ್ ತಂಡ: ಹ್ಯಾರಿ ಬ್ರೂಕ್ (ನಾಯಕ), ಬೆನ್ ಡಕೆಟ್, ವಿಲ್ ಜ್ಯಾಕ್ಸ್, ಜೋ ರೂಟ್, ಜೋಸ್ ಬಟ್ಲರ್ (ವಿಕೆಟ್ ಕೀಪರ್), ಜೇಕಬ್ ಬೆಥೆಲ್, ಸ್ಯಾಮ್ ಕರನ್, ಲಿಯಾಮ್ ಡಾಸನ್, ಜೋಫ್ರಾ ಆರ್ಚರ್, ಆದಿಲ್ ರಶೀದ್, ಸಾಕಿಬ್ ಮಹ್ಮೂದ್, ಟಾಮ್ ಬ್ಯಾಂಟನ್, ಜೋಶ್ ಟಂಗ್, ಗಸ್ ಅಟ್ಕಿನ್ಸನ್, ಜೇಮ್ಸ್ ಕೋಲ್ಸ್, ರೆಹಾನ್ ಅಹ್ಮದ್.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular