HomeLatest Newsರುಕ್ಮಿಣಿ ರಾಧಾಕೃಷ್ಣ ಚಿತ್ರದ ಮೊದಲ ಸಾಂಗ್ ರಿಲೀಸ್: ಮಧುರ ಗೀತೆಗೆ ಫ್ಯಾನ್ಸ್ ಫಿದಾ

ರುಕ್ಮಿಣಿ ರಾಧಾಕೃಷ್ಣ ಚಿತ್ರದ ಮೊದಲ ಸಾಂಗ್ ರಿಲೀಸ್: ಮಧುರ ಗೀತೆಗೆ ಫ್ಯಾನ್ಸ್ ಫಿದಾ

ಸ್ಯಾಂಡಲ್‌ವುಡ್‌ನಲ್ಲಿ ಸದ್ಯ ಸಾಕಷ್ಟು ನಿರೀಕ್ಷೆ ಮೂಡಿಸಿರುವ ರುಕ್ಮಿಣಿ ರಾಧಾಕೃಷ್ಣ ಸಿನಿಮಾದ ಮೊದಲ ಹಾಡು ಅಧಿಕೃತವಾಗಿ ಬಿಡುಗಡೆಯಾಗಿದೆ. ಚಿತ್ರತಂಡ ಹೊರತಂದಿರುವ ರಾಧೆಕ್ಕುಂ ಕಣ್ಣನುಕ್ಕುಂ ಎಂಬ ವಿಡಿಯೋ ಸಾಂಗ್ ಈಗ ಸಿನಿಮಾ ಪ್ರೇಮಿಗಳ ಗಮನ ಸೆಳೆಯುತ್ತಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಉತ್ತಮ ಪ್ರತಿಕ್ರಿಯೆ ಪಡೆದುಕೊಳ್ಳುತ್ತಿದೆ.

ಈ ಮಧುರವಾದ ಹಾಡಿಗೆ ಸ್ಯಾಂಡಲ್‌ವುಡ್‌ನ ಪ್ರಖ್ಯಾತ ಸಾಹಿತಿ ಕೆ ಕಲ್ಯಾಣ್ ಅವರು ಸಾಹಿತ್ಯ ಬರೆದಿದ್ದು, ಸುನಾದ್ ಗೌತಮ್ ಅವರು ಸಂಗೀತ ಸಂಯೋಜನೆ ಮಾಡಿದ್ದಾರೆ. ಗಾಯಕರಾದ ರಜತ್ ಹೆಗ್ಡೆ ಹಾಗೂ ಕವಿತಾ ರಮೇಶ್ ಅವರ ಧ್ವನಿಯಲ್ಲಿ ಮೂಡಿಬಂದಿರುವ ಈ ಗೀತೆ ಕೇಳುಗರ ಮನ ಸೆಳೆಯುವಲ್ಲಿ ಯಶಸ್ವಿಯಾಗಿದೆ. ಮುರಳಿ ಮಾಸ್ಟರ್ ಅವರ ನೃತ್ಯ ನಿರ್ದೇಶನದಲ್ಲಿ ಈ ಹಾಡು ಮೂಡಿಬಂದಿದೆ.

ಪ್ರಾಣ್ ಸುವರ್ಣ ಅವರ ರಚನೆ ಹಾಗೂ ನಿರ್ದೇಶನದಲ್ಲಿ ಸಿದ್ಧವಾಗುತ್ತಿರುವ ಈ ಚಿತ್ರದಲ್ಲಿ ಭರತ್ ಕುಮಾರ್, ಮೋಕ್ಷಿತಾ ಪೈ ಮತ್ತು ರಿಯಾ ಸಚದೇವ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಉಮೇಶ್ ಫಿಲ್ಮ್ಸ್ ಬ್ಯಾನರ್ ಅಡಿಯಲ್ಲಿ ಶಿಲ್ಪಾ ಶ್ರೀನಿವಾಸ್ ಅರ್ಪಿಸುವ ಈ ಚಿತ್ರವನ್ನು ಎನ್ ಎಚ್ ಉಮೇಶ್ ಚಂದ್ ಹಾಗೂ ಎನ್ ಹನುಮಂತರಾಜು ಜಂಟಿಯಾಗಿ ನಿರ್ಮಾಣ ಮಾಡುತ್ತಿದ್ದಾರೆ. ಸುನಿಲ್ ಅವರ ಛಾಯಾಗ್ರಹಣ ಹಾಗೂ ಸುರೇಶ್ ಆರ್ಮುಗಂ ಅವರ ಸಂಕಲನ ಈ ಚಿತ್ರಕ್ಕಿದೆ. ಮೊದಲ ಹಾಡಿನ ಮೂಲಕವೇ ಸದ್ದು ಮಾಡುತ್ತಿರುವ ರುಕ್ಮಿಣಿ ರಾಧಾಕೃಷ್ಣ ಚಿತ್ರದ ಮೇಲಿನ ನಿರೀಕ್ಷೆ ಈಗ ಮತ್ತಷ್ಟು ಹೆಚ್ಚಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular