HomeLatest Newsಮನೆಯಲ್ಲೇ ಕುಳಿತು ನೋಡಿ ಸಮಂತಾ ಆಕ್ಷನ್ ಅವತಾರ: 'ಮಾ ಇಂಟಿ ಬಂಗಾರಂ' ಈಗ ಜಿಯೋ ಹಾಟ್‌ಸ್ಟಾರ್‌ನಲ್ಲಿ...

ಮನೆಯಲ್ಲೇ ಕುಳಿತು ನೋಡಿ ಸಮಂತಾ ಆಕ್ಷನ್ ಅವತಾರ: ‘ಮಾ ಇಂಟಿ ಬಂಗಾರಂ’ ಈಗ ಜಿಯೋ ಹಾಟ್‌ಸ್ಟಾರ್‌ನಲ್ಲಿ ಸ್ಟ್ರೀಮಿಂಗ್

ತೆರೆಮೇಲೆ ಭರ್ಜರಿ ಪ್ರದರ್ಶನ ಕಂಡು ಬಾಕ್ಸ್ ಆಫೀಸ್ ಉಡೀಸ್ ಮಾಡಿದ್ದ ಸಮಂತಾ ರುತ್ ಪ್ರಭು ಮುಖ್ಯ ಭೂಮಿಕೆಯ ‘ಮಾ ಇಂಟಿ ಬಂಗಾರಂ’ ಸಿನಿಮಾ ಕೊನೆಗೂ ಡಿಜಿಟಲ್ ಪರದೆಗೆ ಲಗ್ಗೆ ಇಟ್ಟಿದೆ. ಚಿತ್ರಮಂದಿರಗಳಲ್ಲಿ ಭರ್ಜರಿ ಯಶಸ್ಸು ಕಂಡ ಬೆನ್ನಲ್ಲೇ ಈ ಆಕ್ಷನ್ ಡ್ರಾಮಾ ಸಿನಿಮಾ ಇದೀಗ ಜನಪ್ರಿಯ ಒಟಿಟಿ ಪ್ಲಾಟ್‌ಫಾರ್ಮ್ ಜಿಯೋ ಹಾಟ್‌ಸ್ಟಾರ್‌ನಲ್ಲಿ ಪ್ರಸಾರ ಆರಂಭಿಸಿದೆ.

ದಾಖಲೆ ಬರೆದಿದ್ದ ಸಮಂತಾ ಸಿನಿಮಾ

ಬಿ.ವಿ. ನಂದಿನಿ ರೆಡ್ಡಿ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಚಿತ್ರವು ಜಾಗತಿಕವಾಗಿ 100 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಇತಿಹಾಸ ನಿರ್ಮಿಸಿದೆ. ತೆಲುಗು ಚಿತ್ರರಂಗದಲ್ಲಿ ಮಹಿಳಾ ಪ್ರಧಾನ ಸಿನಿಮಾವೊಂದು ನೂರು ಕೋಟಿ ಕ್ಲಬ್ ಸೇರಿದ ಮೊದಲ ಹೆಗ್ಗಳಿಕೆಗೆ ಈ ಸಿನಿಮಾ ಪಾತ್ರವಾಗಿದೆ. ಚಿತ್ರಮಂದಿರಗಳಲ್ಲಿ ಬಿಡುಗಡೆಯಾದ ಕೇವಲ 28 ದಿನಗಳಲ್ಲೇ ಒಟಿಟಿಗೆ ಬಂದಿರುವುದು ಸಿನಿರಸಿಕರಲ್ಲಿ ಭಾರಿ ಕುತೂಹಲ ಮೂಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸದ್ಯ ಜಿಯೋ ಹಾಟ್‌ಸ್ಟಾರ್‌ನಲ್ಲಿ ಈ ಬ್ಲಾಕ್‌ಬಸ್ಟರ್ ಸಿನಿಮಾ ತೆಲುಗು, ತಮಿಳು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ವೀಕ್ಷಣೆಗೆ ಲಭ್ಯವಿದೆ. ಆದರೆ, ಹಿಂದಿ ಆವೃತ್ತಿಯ ಒಟಿಟಿ ಬಿಡುಗಡೆ ಕುರಿತು ಚಿತ್ರತಂಡದಿಂದ ಯಾವುದೇ ಅಧಿಕೃತ ಅಪ್‌ಡೇಟ್ ಇನ್ನು ಹೊರಬಿದ್ದಿಲ್ಲ.

ಬಲಿಷ್ಠ ತಾರಾಗಣ, ಆಕರ್ಷಕ ಕಥೆ

ಮದುವೆಯ ನಂತರ ಗೃಹಣಿಯಾಗಿ ನೆಮ್ಮದಿಯ ಜೀವನ ನಡೆಸಲು ಬಯಸುವ ನಾಯಕಿ, ತನ್ನ ಹಳೆಯ ರಹಸ್ಯ ಮತ್ತು ಶತ್ರುಗಳು ಎದುರಾದಾಗ ಕುಟುಂಬವನ್ನು ರಕ್ಷಿಸಲು ಹೇಗೆ ಹೋರಾಡುತ್ತಾಳೆ ಎಂಬ ರೋಚಕ ಕಥಾಹಂದರವನ್ನು ಈ ಸಿನಿಮಾ ಹೊಂದಿದೆ. ಸಮಂತಾ ಅವರೊಂದಿಗೆ ಗುಲ್ಷನ್ ದೇವಯ್ಯ, ದಿಗಂತ್ ಮಂಚಾಲೆ, ಮಂಜೂಷಾ, ಶ್ರೀಮುಖಿ, ಗೌತಮಿ ಮತ್ತು ಆನಂದ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ. ಟ್ರಲಾಲಾ ಮೂವಿಂಗ್ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ಸಮಂತಾ, ರಾಜ್ ನಿಡಿಮೋರು ಮತ್ತು ಹಿಮಾಂಕ್ ದುವ್ವುರು ಜಂಟಿಯಾಗಿ ಈ ಚಿತ್ರವನ್ನು ನಿರ್ಮಿಸಿದ್ದು, ಸಂತೋಷ್ ನಾರಾಯಣನ್ ಸಂಗೀತ ನಿರ್ದೇಶನ ಮಾಡಿದ್ದಾರೆ.

ಚಿತ್ರಮಂದಿರಗಳಲ್ಲಿ ಮಿಸ್ ಮಾಡಿಕೊಂಡಿದ್ದ ಅಭಿಮಾನಿಗಳು ಈಗ ಮನೆಯಲ್ಲೇ ಕುಳಿತು ಈ ಆಕ್ಷನ್ ಎಂಟರ್ಟೈನರ್ ಸಿನಿಮಾವನ್ನು ಆನಂದಿಸಬಹುದಾಗಿದೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular