HomeKarnatakaಕಾವೇರಿ ಕಿಚ್ಚು: ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ನದಿ ತಟದಲ್ಲಿ ಮಲಗಿ ಕರವೇ ಪ್ರತಿಭಟನೆ

ಕಾವೇರಿ ಕಿಚ್ಚು: ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ನದಿ ತಟದಲ್ಲಿ ಮಲಗಿ ಕರವೇ ಪ್ರತಿಭಟನೆ

ಮಂಡ್ಯ: ಕಾವೇರಿ ನದಿ ನೀರು ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿರ್ವಹಣಾ ಸಮಿತಿ (CWRC) ನೀಡಿರುವ ಆದೇಶದ ಬೆನ್ನಲ್ಲೇ ಮಂಡ್ಯ, ಮೈಸೂರು ಭಾಗದಲ್ಲಿ ರೈತರು ಹಾಗೂ ಕನ್ನಡಪರ ಸಂಘಟನೆಗಳ ಪ್ರತಿಭಟನೆಗಳು ತೀವ್ರಗೊಂಡಿವೆ.

ತಮಿಳುನಾಡಿಗೆ ಮತ್ತೆ 9,000 ಕ್ಯೂಸೆಕ್ ನೀರನ್ನು 15 ದಿನಗಳ ಕಾಲ ಹರಿಸಬೇಕು ಎಂಬ CWRC ಆದೇಶವನ್ನು ಖಂಡಿಸಿ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ರೈತರು ಮತ್ತು ಕನ್ನಡಪರ ಸಂಘಟನೆಗಳು ಹೋರಾಟ ತೀವ್ರಗೊಳಿಸಿವೆ. ಮಂಡ್ಯ ರಕ್ಷಣಾ ವೇದಿಕೆ ನೇತೃತ್ವದಲ್ಲಿ ಸ್ನಾನಘಟ್ಟದ ಬಳಿ ಪ್ರತಿಭಟನೆ ಆರಂಭವಾಗಿದೆ.

ರಾಜ್ಯ ಸರ್ಕಾರವು ಕರ್ನಾಟಕದ ರೈತರಿಗೆ ಅನ್ಯಾಯ ಮಾಡುತ್ತಿದೆ ಮತ್ತು ತಮಿಳುನಾಡಿಗೆ ನೀರನ್ನು ಹರಿಸುವ ಕೆಲಸ ಮಾಡುತ್ತಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗಾಗಲೇ ಕಟಾವು ಮಾಡಿದ ಬೆಳೆಗಳಿಗೆ ನೀರಿಲ್ಲದೆ ರೈತರು ನಷ್ಟ ಅನುಭವಿಸಿದ್ದಾರೆ. ಮುಂದಿನ ಬೆಳೆಗಳಿಗೂ ನೀರಿನ ಕೊರತೆ ಎದುರಾಗಿದೆ. ಕುಡಿಯುವ ನೀರಿಗೂ ಸಂಕಷ್ಟ ಎದುರಾಗುವ ಭೀತಿ ಇದೆ. ಇಂತಹ ಸಂದರ್ಭದಲ್ಲಿ ರಾಜ್ಯದ ರೈತರ ಹಿತ ಕಾಯುವ ಬದಲು ತಮಿಳುನಾಡಿಗೆ ನೀಋ ಬಿಡುವುದು ಎಷ್ಟು ಸರಿ ಎಂದು ಪ್ರತಿಭಟನಾಕಾರರು ಪ್ರಶ್ನಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಶ್ರೀರಂಗಪಟ್ಟಣದ ಸ್ನಾನಘಟ್ಟದ ಬಳಿ ನದಿ ತಟದಲ್ಲಿ ಮಲಗಿ ಹೊಟ್ಟೆ ಮೇಲೆ ತಣ್ಣೀರು ಬಟ್ಟೆ ಹಾಕಿಕೊಂಡು ರೈತರು ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕಾವೇರಿ ಸಮಿತಿಗಳ ಆದೇಶಗಳು ಅವೈಜ್ಞಾನಿಕವಾಗಿದ್ದು, ಕರ್ನಾಟಕದ ವಾಸ್ತವ ಪರಿಸ್ಥಿತಿಯನ್ನು ಪರಿಗಣಿಸಿಲ್ಲ ಎಂದು ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಕೂಡಲೇ ತಮಿಳುನಾಡಿಗೆ ನೀರು ಹರಿಸುವುದನ್ನು ನಿಲ್ಲಿಸಿ, ಮಂಡ್ಯ ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸುವಂತೆ ಮತ್ತು ರೈತರಿಗೆ ಸೂಕ್ತ ಪರಿಹಾರ ನೀಡುವಂತೆ ಪ್ರತಿಭಟನಾಕಾರರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular