HomeAgricultureಭವಿಷ್ಯದಲ್ಲಿ ಎಐನಿಂದ ಕೃಷಿ ಕ್ಷೇತ್ರದಲ್ಲೂ ಕ್ರಾಂತಿ

ಭವಿಷ್ಯದಲ್ಲಿ ಎಐನಿಂದ ಕೃಷಿ ಕ್ಷೇತ್ರದಲ್ಲೂ ಕ್ರಾಂತಿ

“ಬದಲಾದ ತಂತ್ರಜ್ಞಾನ ಯುಗದಲ್ಲಿ ಕೃತಕ ಬುದ್ಧಿಮತ್ತೆ ಕೃಷಿ ಕ್ಷೇತ್ರದಲ್ಲಿಯೂ ಮಹತ್ವದ ಬದಲಾವಣೆಯನ್ನು, ಉತ್ತಮ ತಂತ್ರಜ್ಞಾನವನ್ನು ತರಲಿದೆ” ಎಂದು ಹಾಸನ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ ತಿಳಿಸಿದರು.

ಹಾಸನ ಆಕಾಶವಾಣಿ ಕಿಸಾನ್ ದಿವಸ್ ಅಂಗವಾಗಿ ಏರ್ಪಡಿಸಿದ್ದ ‘ಕೃತಕ ಬುದ್ಧಿಮತ್ತೆ ಹಾಗೂ ಕೃಷಿ ಅಭಿವೃದ್ಧಿ’ ಕುರಿತ ವಿಚಾರ ಸಂಕಿರಣ ಉದ್ಘಾಟಿಸಿ ಅವರು ಮಾತನಾಡಿದರು.
“ಹವಾಮಾನ ಮುನ್ಸೂಚನೆ, ಮಣ್ಣು ಪರೀಕ್ಷೆ, ಬೆಳೆ ಸಂರಕ್ಷಣೆ ಹಾಗೂ ಮಾರುಕಟ್ಟೆ ದರಗಳ ವಿಶ್ಲೇಷಣೆಯಲ್ಲಿ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ರೈತರ ಕೃಷಿ ಚಟುವಟಿಕೆಗಳು ಹಾಗೂ ರೈತರ ಆದಾಯದ ದ್ವಿಗುಣಕ್ಕೆ ಹೆಚ್ಚು ಸಹಾಯ ಮಾಡುತ್ತದೆ” ಎಂದು ಹೇಳಿದರು.

“50ರ ದಶಕದಿಂದಲೂ ಆಕಾಶವಾಣಿ ಕೃಷಿ ಸೇರಿದಂತೆ ಇತರೆ ತಂತ್ರಜ್ಞಾನಗಳನ್ನು ಸಾರ್ವಜನಿಕರಿಗೆ ಪರಿಚಯಿಸುವ ಪರಿಪಾಠ ಬೆಳೆಸಿಕೊಂಡಿದ್ದು ಇದು ಇಂದಿಗೂ ಮುಂದುವರೆದಿರುವುದು ಮೆಚ್ಚುಗೆಯ ಸಂಗತಿ” ಎಂದು ಅವರು ಶ್ಲಾಘಿಸಿದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

“ಹಾಸನ ಆಕಾಶವಾಣಿ ಕೃಷಿಕರಿಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನದ ಬಗ್ಗೆ ಜಾಗೃತಿ ಮೂಡಿಸುವಂತಹ ವಿಚಾರ ಸಂಕಿರಣ ಏರ್ಪಡಿಸಿರುವುದು ಅತ್ಯಂತ ಸೂಕ್ತವಾಗಿದೆ” ಎಂದು ತಿಳಿಸಿದರು.

ವಿಚಾರಗೋಷ್ಠಿಯಲ್ಲಿ ಕೃತಕ ಬುದ್ಧಿಮತ್ತೆ ಹಾಗೂ ಕೃಷಿ ಅಭಿವೃದ್ಧಿಯ ಸಾಧ್ಯತೆಗಳ ಕುರಿತು ಬೆಂಗಳೂರಿನ ಎಐ ವಿನ್ಯಾಸಕರಾದ ಎನ್. ಜಿ. ಕಿರಣ್ ಮಾಹಿತಿ ನೀಡಿದರು.

ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರಾದ ಡಾ. ಪಿ. ರಮೇಶ್ ಕುಮಾರ್, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರಾದ ಡಾ. ಎಚ್.ಆರ್. ಯೋಗೇಶ್, ಆಕಾಶವಾಣಿ ಕೇಂದ್ರದ ಕಾರ್ಯಕ್ರಮ ಮುಖ್ಯಸ್ಥರಾದ ಸುಜಾತ ಎಫ್ ತಳವಾರ್, ಆಕಾಶವಾಣಿಯ ಕಾರ್ಯಕ್ರಮ ನಿರ್ವಹಣಾಧಿಕಾರಿ ಅರಕಲಗೂಡು ವಿ. ಮಧುಸೂದನ್ ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular