ಯುಪಿ ಸಿಎಂ ಯೋಗಿ ಭರ್ಜರಿ ಪ್ರಚಾರ: ಬಿಜೆಪಿ ಬಂಡಾಯ ಅಭ್ಯರ್ಥಿ ಭಾಗಿ

ಮಂಗಳೂರು: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಇಂದು ಮಂಗಳೂರಿಗೆ ಆಗಮಿಸಲಿದ್ದು, ಬಿಜೆಪಿ ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರ ಕೈಗೊಂಡಿದ್ದಾರೆ.

ಪುತ್ತೂರಿನ ಕಾರ್ಯಕ್ರಮದಲ್ಲಿ ಯೋಗಿ ಆದಿತ್ಯನಾಥ್ ಭಾಗವಹಿಸಲಿದ್ದು, ತಾವು ಕೂಡ ಪಾಲ್ಗೊಳ್ಳುವುದಾಗಿ ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.

ಪುತ್ತೂರು ಬಿಜೆಪಿ ಅಭ್ಯರ್ಥಿ ಆಶಾ ತಿಮ್ಮಪ್ಪ ಸೇರಿದಂತೆ ಸುತ್ತಮುತ್ತಲಿನ ಕ್ಷೇತ್ರಗಳ ಅಭ್ಯರ್ಥಿಗಳ ಪರವಾಗಿ ಯೋಗಿ ಆದಿತ್ಯನಾಥ್ ಮತಯಾಚಿಸಲಿದ್ದು, ಈ ಸಮಾವೇಶದಲ್ಲಿ ತಾವು ಕೂಡ ಭಾಗವಹಿಸುವುದಾಗಿ ಪುತ್ತೂರು ಬಿಜೆಪಿ ಬಂಡಾಯ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಹೇಳಿದ್ದಾರೆ.

ಮೋದಿ ಮತ್ತು ಯೋಗಿ ಮಾದರಿ ಆಡಳಿತ ಬರಬೇಕೆನ್ನುವ ಆಶಯದಿಂದ ಹಿಂದುತ್ವದ ರಾಜಕಾರಣದಡಿಯಲ್ಲಿ ನಾನು ಚುನಾವಣೆಗೆ ಸ್ಪರ್ಧಿಸಿದ್ದು, ಗೆಲುವು ನಿಶ್ಚಿತ ಎಂದು ಅವರು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read