ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳೇ ಕತ್ತಲಲ್ಲಿವೆ: ಉಚಿತ ವಿದ್ಯುತ್ ಭರವಸೆ ನೀಡಿದ ಕಾಂಗ್ರೆಸ್ ಗೆ ಅರುಣ್ ಸಿಂಗ್ ಟಾಂಗ್

ಗದಗ: ಉಚಿತವಾಗಿ 200 ಯೂನಿಟ್ ವಿದ್ಯುತ್ ನೀಡುವುದಾಗಿ ಘೋಷಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ವಿರುದ್ಧ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಕಿಡಿಕಾರಿದ್ದಾರೆ.

ಗದಗದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳು ಅಂಧಕಾರದಲ್ಲಿ ಮುಳುಗಿವೆ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಷ್ಟು ಗಂಟೆ ವಿದ್ಯುತ್ ಇದೆ ಎಂದು ನೋಡಲಿ. ಕಾಂಗ್ರೆಸ್ ಅಧಿಕಾರದಲ್ಲಿರುವ ರಾಜಸ್ಥಾನದಲ್ಲಿ ರಾತ್ರಿ ಮಾತ್ರ ವಿದ್ಯುತ್ ನೀಡಲಾಗುತ್ತಿದೆ. ಅಲ್ಲಿ ವಿದ್ಯಾರ್ಥಿಗಳು ಓದಲು ಸಂಜೆಯೂ ವಿದ್ಯುತ್ ಇರುವುದಿಲ್ಲ. ಛತ್ತೀಸ್ ಗಢ, ರಾಜಸ್ತಾನ ಪರಿಸ್ಥಿತಿ ನೋಡಿದರೆ ನಿಮಗೆ ಹೆದರಿಕೆ ಅನಿಸುತ್ತದೆ ಎಂದರು.

ಕಾಂಗ್ರೆಸ್ ದೇಶದಲ್ಲಿ ಗಟ್ಟಿಯಾಗಿಲ್ಲ, ಕಳೆದುಹೋಗುತ್ತಿದೆ. ಸುಳ್ಳು ಹೇಳಿ ಅಧಿಕಾರಕ್ಕೆ ಬರಲು ಪ್ರಯತ್ನಿಸುತ್ತಿದೆ. ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ 150 ಸ್ಥಾನ ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read