ಬಿ.ವೈ. ವಿಜಯೇಂದ್ರ ವಿರುದ್ಧ ಸೋಮಣ್ಣ ಪುತ್ರನ ಪರೋಕ್ಷ ವಾಗ್ದಾಳಿ; ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್

ಬಿಜೆಪಿಯಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ ಎಂಬ ಕಾರಣಕ್ಕೆ ನಾಯಕರ ವಿರುದ್ಧ ಮುನಿಸಿಕೊಂಡಿರುವ ವಸತಿ ಸಚಿವ ವಿ. ಸೋಮಣ್ಣ ಮಂಗಳವಾರದಂದು ನಡೆಸಿದ ಪತ್ರಿಕಾಗೋಷ್ಠಿಯಲ್ಲಿ ತಮ್ಮ ಮನದಾಳದ ಮಾತುಗಳನ್ನು ಹೊರ ಹಾಕಿದ್ದಾರೆ.

ಪತ್ರಿಕಾಗೋಷ್ಠಿಯಲ್ಲಿ ಭಾವುಕರಾಗಿಯೇ ಮಾತನಾಡಿದ ಅವರು, ಹೊಟ್ಟೆಪಾಡಿಗಾಗಿ ಬೆಂಗಳೂರಿಗೆ ಬಂದ ನಾನು ಕಷ್ಟಪಟ್ಟು ಈ ಹಂತ ತಲುಪಿದ್ದೇನೆ. ಅಲ್ಲದೆ ಪ್ರಾಮಾಣಿಕನಾಗಿರುವ ನಾನು ಯಾರ ಮುಲಾಜಿನಲ್ಲಿಯೂ ಇಲ್ಲ ಎಂಬ ಖಡಕ್ ಮಾತುಗಳನ್ನು ಆಡಿದ್ದಾರೆ.

ಜೊತೆಗೆ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ. ಟಿಕೆಟ್ ಕೊಟ್ಟರೆ ಸ್ಪರ್ಧಿಸುತ್ತೇನೆ. ಇಲ್ಲವಾದರೆ ಪಕ್ಷಕ್ಕಾಗಿ ಕೆಲಸ ಮಾಡುತ್ತೇನೆ ಎನ್ನುವ ಮೂಲಕ ಕಾಂಗ್ರೆಸ್ ಸೇರ್ಪಡೆ ವದಂತಿಗೆ ವಿ. ಸೋಮಣ್ಣ ತೆರೆ ಎಳೆದಿದ್ದಾರೆ. ಇದರ ಮಧ್ಯೆ ಅವರ ಪುತ್ರ ಅರುಣ್ ಸೋಮಣ್ಣ, ಯಡಿಯೂರಪ್ಪನವರ ಪುತ್ರ ಬಿ.ವೈ. ವಿಜಯೇಂದ್ರ ವಿರುದ್ಧ ಮಾತನಾಡಿರುವ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಫುಲ್ ವೈರಲ್ ಆಗಿದೆ.

ಮೂಡಲಪಾಳ್ಯ ಕುರುಬರ ಸಂಘದಲ್ಲಿ ನಡೆದ ಕಾರ್ಯಕ್ರಮದ ವೇಳೆ ಮಾತನಾಡಿರುವ ಅರುಣ್ ಸೋಮಣ್ಣ, ನಮ್ಮ ಪಕ್ಷದಲ್ಲಿ ಹಿರಿಯ ನಾಯಕರೊಬ್ಬರಿದ್ದಾರೆ. ಅವರು ಪುತ್ರನಿಗಾಗಿ ತಮ್ಮ ಸೀಟು ತ್ಯಾಗ ಮಾಡಿ, ಅವನೇ ಮುಂದಿನ ನಾಯಕ ಎಂಬಂತೆ ಬಿಂಬಿಸುತ್ತಿದ್ದಾರೆ. ಅವರ ಪುತ್ರನಿಗೆ ಕರೆ ಮಾಡಿದರೆ ಏಕವಚನದಲ್ಲಿಯೇ ಮಾತನಾಡಿಸುವ ಮಹಾಪುರುಷ ಎಂದು ವಿಜಯೇಂದ್ರ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದ್ದಾರೆ. ಇದರ ವಿಡಿಯೋ ಈಗ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕುತೂಹಲ ಮೂಡಿಸಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read