ಚುನಾವಣೋತ್ತರ ಸಮೀಕ್ಷೆ ಸಂಭ್ರಮದಲ್ಲಿರುವ ಬಿಜೆಪಿಗೆ ಮತ್ತೊಂದು ಸಿಹಿ ಸುದ್ದಿ: ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಜಯಭೇರಿ

ಇಟಾನಗರ: ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯಭೇರಿ ಬಾರಿಸಿದೆ. 60 ಕ್ಷೇತ್ರಗಳನ್ನು ಒಳಗೊಂಡಿರುವ ಅರುಣಾಚಲ ಪ್ರದೇಶ ವಿಧಾನಸಭೆಯ 50 ಸ್ಥಾನಗಳಿಗೆ ಮತದಾನ ನಡೆದಿತ್ತು. 10 ಸ್ಥಾನಗಳಲ್ಲಿ ಆಡಳಿತಾರೂಢ ಬಿಜೆಪಿ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿದ್ದರು.

ಇಂದು ಮತ ಎಣಿಕೆ ನಡೆದು ಚುನಾವಣಾ ಫಲಿತಾಂಶ ಪ್ರಕಟವಾಗಿದ್ದು, ಬಿಜೆಪಿ 46 ಸ್ಥಾನಗಳನ್ನು ಗಳಿಸಿದೆ. NPEP 5, ಪಿಪಿಎ 2, NCP 2,ಕಾಂಗ್ರೆಸ್ 1 ಸ್ಥಾನ ಗಳಿಸಿದೆ. ಅರುಣಾಚಲ ಪ್ರದೇಶ ವಿಧಾನಸಭೆ ಚುನಾವಣೆ ಮತ್ತು ಲೋಕಸಭಾ ಚುನಾವಣೆ ಮತದಾನ ಏಪ್ರಿಲ್ 19 ರಂದು ಏಕಕಾಲದಲ್ಲಿ ನಡೆದಿತ್ತು. ಇಂದು ಬೆಳಿಗ್ಗೆಯಿಂದ 24 ಕೇಂದ್ರಗಳಲ್ಲಿ ಮತ ಎಣಿಕೆ ಆರಂಭವಾಗಿದ್ದು, ಫಲಿತಾಂಶ ಪ್ರಕಟವಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read