
ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಅನುಮತಿ ಪಡೆಯದೆ ಅರುಣ್ ಕುಮಾರ್ ಅವರು ಮತಯಾಚನೆ ಮಾಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಗಂಗಾಜಲ ತಾಂಡಾ ಸಮೀಪ ಇರುವ ಕೆವಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅರುಣ್ ಕುಮಾರ್ ಮತಯಾಚಿಸಿದ್ದರು. ಅವರು ಮತಯಾಚನೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಅನುಮತಿ ಪಡೆದುಕೊಳ್ಳದೆ ಮತಯಾಚನೆ ಮಾಡಿದ್ದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

 
		 
		 
		 
		 Loading ...
 Loading ... 
		 
		 
		