HomeKarnatakaಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

ಅನುಮತಿ ಪಡೆಯದೆ ಮತಯಾಚನೆ: ಬಿಜೆಪಿ ಅಭ್ಯರ್ಥಿ ವಿರುದ್ಧ ಎಫ್ಐಆರ್

ಹಾವೇರಿ: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅರುಣ್ ಕುಮಾರ್ ಪೂಜಾರ್ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಅನುಮತಿ ಪಡೆಯದೆ ಅರುಣ್ ಕುಮಾರ್ ಅವರು ಮತಯಾಚನೆ ಮಾಡಿದ ಹಿನ್ನೆಲೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಗಂಗಾಜಲ ತಾಂಡಾ ಸಮೀಪ ಇರುವ ಕೆವಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಅರುಣ್ ಕುಮಾರ್ ಮತಯಾಚಿಸಿದ್ದರು. ಅವರು ಮತಯಾಚನೆ ಮಾಡುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದರು. ಅನುಮತಿ ಪಡೆದುಕೊಳ್ಳದೆ ಮತಯಾಚನೆ ಮಾಡಿದ್ದ ಹಿನ್ನೆಲೆಯಲ್ಲಿ ರಾಣೆಬೆನ್ನೂರು ಗ್ರಾಮೀಣ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular