BREAKING: ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕೇಜ್ರಿವಾಲ್

ನವದೆಹಲಿ: ದೆಹಲಿ ಹೈಕೋರ್ಟ್ ಜಾಮೀನು ತಡೆ ಆದೇಶ ಪ್ರಶ್ನಿಸಿ ಅರವಿಂದ್ ಕೇಜ್ರಿವಾಲ್ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ.

ವಕೀಲರ ಮೂಲಕ ಜಾಮೀನು ಕೋರಿ ಸುಪ್ರೀಂ ಕೋರ್ಟ್ ಗೆ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದಾರೆ. ರೋಸ್ ಅವೆನ್ಯೂ ನ್ಯಾಯಾಲಯ ಕೇಜ್ರಿವಾಲ್ ಗೆ ಜಾಮೀನು ನೀಡಿತ್ತು. ಈ ಆದೇಶಕ್ಕೆ ದೆಹಲಿ ಹೈಕೋರ್ಟ್ ತಡೆ ನೀಡಿತ್ತು. ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ವಕೀಲರ ಮೂಲಕ ಅರವಿಂದ್ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದು, ನಾಳೆ ಅರ್ಜಿಯ ವಿಚಾರಣೆ ನಡೆಯುವ ಸಾಧ್ಯತೆ ಇದೆ.

ದೆಹಲಿ ಮದ್ಯ ನೀತಿ ಪರಿಷ್ಕರಣೆಯಲ್ಲಿ ಅಕ್ರಮ ಪ್ರಕರಣದಲ್ಲಿ ಕೇಜ್ರಿವಾಲ್ ಬಂಧನದಲ್ಲಿದ್ದಾರೆ. ವಿಚಾರಣಾ ನ್ಯಾಯಾಲಯ ನೀಡಿದ್ದ ಜಾಮೀನಿಗೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ ನೀಡಿದ್ದರ ವಿರುದ್ಧ ಭಾನುವಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದಾರೆ. ಕೇಜ್ರಿವಾಲ್ ಅವರ ವಕೀಲರು ಸೋಮವಾರ ಬೆಳಿಗ್ಗೆ ವಿಚಾರಣೆಗೆ ಮನವಿ ಮಾಡಿದ್ದಾರೆ ಎಂದು ಆಮ್ ಆದ್ಮಿ ಪಕ್ಷ(ಎಎಪಿ) ಹೇಳಿದೆ.

https://twitter.com/ANI/status/1804857507971498315

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read