BREAKING NEWS: ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ: ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ

ನವದೆಹಲಿ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ ಎಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮಹತ್ವದ ಘೋಷಣೆ ಮಾಡಿದ್ದಾರೆ.

ದೆಹಲಿ ಅಬಕಾರಿ ನೀತಿ ಹಗರಣ ಆರೋಪ ಪ್ರಕರಣದಲ್ಲಿ ಇಡಿ, ಸಿಬಿಐ ಬಂಧನದ ಬಳಿಕ ಜಾಮೀನಿನ ಮೇಲೆ ಹೊರಬಂದಿರುವ ಅರವಿಂದ್ ಕೇಜ್ರಿವಾಲ್, ದೆಹಲಿಯ ಆಪ್ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದು, ಈ ವೇಳೆ ತಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುತ್ತೇನೆ ಎಂದು ತಿಳಿಸಿದ್ದಾರೆ.

ಇನ್ನೆರಡು ದಿನಗಳಲ್ಲಿ ನಾನು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ. ಜನರ ಬಳಿ ಹೋಗಿ ಮತ್ತೆ ಜನಾಶಿರ್ವಾದ ಪಡೆದು ಅಧಿಕಾರಕ್ಕೆ ಬರುತ್ತೇನೆ. ಕೇಜ್ರಿವಾಲ್ ಪ್ರಾಮಾಣಿಕವಾಗಿದ್ದರೆ ಮತ್ತೆ ಆಪ್ ಗೆ ಮತ ಹಾಕಿ ಎಂದು ಕರೆ ನೀಡಿದ್ದಾರೆ.

ನವೆಂಬರ್ ನಲ್ಲಿ ದೆಹಲಿ ವಿಧಾನಸಭೆ ಚುನಾವಣೆಗೆ ಒತ್ತಾಯಿಸಲಾಗುತ್ತಿದೆ. ಆರೋಪಗಳನ್ನು ಹೊತ್ತು  ಸಿಎಂ ಸ್ಥಾನದಲ್ಲಿ ಮುಂದುವರೆಯಲ್ಲ. ನಾನು ಪ್ರಾಮಾಣಿಕವಾಗಿದ್ದರೆ ಮಾತ್ರ ನನಗೆ ಆಶಿರ್ವಾದ ಮಾಡಿ ಮತ್ತೆ ಆಯ್ಕೆ ಮಾಡಿ ಎಂದು ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read