HomeIndiaBREAKING NEWS: ದೆಹಲಿ ಸಿಎಂ ಕೇಜ್ರಿವಾಲ್ ಗೆ ಇಡಿ ಸಮನ್ಸ್

BREAKING NEWS: ದೆಹಲಿ ಸಿಎಂ ಕೇಜ್ರಿವಾಲ್ ಗೆ ಇಡಿ ಸಮನ್ಸ್

ನವದೆಹಲಿ: ದೆಹಲಿ ಅಬಕಾರಿ ನೀತಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಡಿಸೆಂಬರ್ 21 ರಂದು ವಿಚಾರಣೆಗೆ ಹಾಜರಾಗುವಂತೆ ಜಾರಿ ನಿರ್ದೇಶನಾಲಯವು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರಿಗೆ ಸಮನ್ಸ್ ನೀಡಿದೆ.

ದೆಹಲಿ ಮುಖ್ಯಮಂತ್ರಿಗೆ ಇದು ಎರಡನೇ ಸಮನ್ಸ್ ಆಗಿದೆ. ಇದಕ್ಕೂ ಮುನ್ನ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ(ಸಿಬಿಐ) ಅವರನ್ನು ವಿಚಾರಣೆ ನಡೆಸಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇದಕ್ಕೂ ಮುನ್ನ ದೆಹಲಿ ಮುಖ್ಯಮಂತ್ರಿ ಜಾರಿ ನಿರ್ದೇಶನಾಲಯದ ಸಮನ್ಸ್‌ನಿಂದ ಹೊರಗುಳಿದಿದ್ದರು. ತನಿಖಾ ಸಂಸ್ಥೆಯು ನವೆಂಬರ್ 2 ರಂದು ವಿಚಾರಣೆಗೆ ಕರೆದಿತ್ತು. ಆದಾಗ್ಯೂ ದೆಹಲಿ ಸಿಎಂ ಕೇಜ್ರಿವಾಲ್ ಅವರು, ಇಡಿಗೆ ಅಸ್ಪಷ್ಟ ನೋಟಿಸ್ ಹಿಂತೆಗೆದುಕೊಳ್ಳುವಂತೆ ಒತ್ತಾಯಿಸಿದ್ದರಲ್ಲದೇ, ಇದು ಕಾನೂನುಬಾಹಿರ ಮತ್ತು ರಾಜಕೀಯ ಪ್ರೇರಿತ ಎಂದು ಆರೋಪಿಸಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular