HomeKarnatakaಆರ್ಯವೈಶ್ಯ ಸಮುದಾಯ ವಿದ್ಯಾರ್ಥಿಗಳೇ ಗಮನಿಸಿ : `ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಅರ್ಜಿ ಆಹ್ವಾನ

ಆರ್ಯವೈಶ್ಯ ಸಮುದಾಯ ವಿದ್ಯಾರ್ಥಿಗಳೇ ಗಮನಿಸಿ : `ಅರಿವು ಶೈಕ್ಷಣಿಕ ಸಾಲ’ ಯೋಜನೆಯಡಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನ ಅರಿವು ಶೈಕ್ಷಣಿಕ ಸಾಲ ಯೋಜನೆಯಡಿ ಸಾಲ-ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನಿಲಾಗಿದೆ.

ಅರ್ಹತೆಗಳು:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿ ನಲ್ಲಿ ವ್ಯಾಸಂಗ ಮಾಡುವ ಆರ್ಯವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1 ಲಕ್ಷ ಸಾಲವನ್ನು ಶೇ.2 ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು. ಅರ್ಜಿದಾರರು 18 ವರ್ಷ ಮೇಲ್ಪಟ್ಟು ಹಾಗೂ 35 ವರ್ಷದ ಒಳಗಿನವರಾಗಿರಬೇಕು, ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6 ಲಕ್ಷ ಮಿತಿಯೊಳಗಿರಬೇಕು.

ಸಾಮಾನ್ಯ ಅರ್ಹತೆಗಳು:

ಸಾಮಾನ್ಯ ವರ್ಗದಲ್ಲಿ ಆರ್ಯವೈಶ್ಯ ಸಮುದಾಯಕ್ಕೆ ಸೇರಿರಬೇಕು, ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು), ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಹಾಗೂ ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು, ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33, ವಿಕಲಚೇತನರಿಗೆ ಶೇ.5 ಹಾಗೂ ತೃತೀಯ ಲಿಂಗಳಿಗೆ ಶೇ.5 ಮೀಸಲಾತಿ ಇರಿಸಿದೆ, ಒಂದು ಕುಟುಂಬದಲ್ಲಿ ಇಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ.

ಅರ್ಜಿ ಸಲ್ಲಿಸಲು ನವೆಂಬರ್ 30 ಕೊನೆಯ ದಿನವಾಗಿರುತ್ತದೆ.

ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ವೆಬ್‍ಸೈಟ್ www.kacdc.karnataka.gov.in ಗೆ ಭೇಟಿ ನೀಡಬಹುದು ಎಂದು ಕರ್ನಾಟಕ ಆರ್ಯವೈಶ್ಯ ಸಮುದಾಯ ಅಭಿವೃದ್ಧಿ ನಿಗಮ ವ್ಯವಸ್ಥಾಪಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular