HomeLatest Newsಕೇಂದ್ರದ ನಿರ್ದೇಶನದಂತೆ ಪಡಿತರ ಚೀಟಿದಾರರ ಶೇ. 100ರಷ್ಟು ಆಧಾರ್ ಸೀಡಿಂಗ್, ಇ-ಕೆವೈಸಿ ಕಡ್ಡಾಯ: ಆಹಾರ ಇಲಾಖೆ...

ಕೇಂದ್ರದ ನಿರ್ದೇಶನದಂತೆ ಪಡಿತರ ಚೀಟಿದಾರರ ಶೇ. 100ರಷ್ಟು ಆಧಾರ್ ಸೀಡಿಂಗ್, ಇ-ಕೆವೈಸಿ ಕಡ್ಡಾಯ: ಆಹಾರ ಇಲಾಖೆ ಮಹತ್ವದ ಸೂಚನೆ

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ NFSA 2013  ಅಡಿಯಲ್ಲಿ ಕೇಂದ್ರ ಸರ್ಕಾರದ ನಿರ್ದೇಶನಗಳನ್ವಯ ಶೇ.100 ರಷ್ಟು ಪಡಿತರ ಚೀಟಿದಾರರ Aadhar seeding ಮತ್ತು ಇ-ಕೆವೈಸಿಯನ್ನು ಜೂ.30 ರೊಳಗೆ ಪೂರ್ಣಗೊಳಿಸಲು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಆಯುಕ್ತರು ಸೂಚಿಸಿರುತ್ತಾರೆ.

ಈ ಸಂಬಂಧ ಜಿಲ್ಲೆಯ ಎಲ್ಲಾ ತಾಲ್ಲೂಕಿನ ಎಲ್ಲಾ ನ್ಯಾಯಬೆಲೆ ಅಂಗಡಿಗಳಲ್ಲಿ ಉಚಿತವಾಗಿ ಇ-ಕೆವೈಸಿ ಕಾರ್ಯ ಮಾಡುತ್ತಿದ್ದು, ಜಿಲ್ಲೆಯಲ್ಲಿನ ಅಂತ್ಯೋದಯ ಪಡಿತರ ಚೀಟಿದಾರರು ಹಾಗೂ ಆದ್ಯತಾ ಪಡಿತರ ಚೀಟಿದಾರರಲ್ಲಿ ಈವರೆಗೂ ಇ-ಕೆವೈಸಿ ಮಾಡಿಸದೇ ಇರುವ ಸದಸ್ಯರು ಮಾತ್ರ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗಳಿಗೆ ತೆರಳಿ ಕಡ್ಡಾಯವಾಗಿ ಸದರಿ ದಿನಾಂಕದೊಳಗಾಗಿ ಇ-ಕೆವೈಸಿ ಮಾಡಿಸುವಂತೆ ಹಾಸನ ಜಿಲ್ಲೆಯ ಪಡಿತರ ಚೀಟಿದಾರರಿಗೆ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular