HomeKarnatakaಹೆಣ್ಣು ಮಗು ಬೇಡ ಎನ್ನುವುದು ಕೆಟ್ಟ ವ್ಯವಸ್ಥೆ: ಆಸರೆ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ: ದಿನೇಶ್...

ಹೆಣ್ಣು ಮಗು ಬೇಡ ಎನ್ನುವುದು ಕೆಟ್ಟ ವ್ಯವಸ್ಥೆ: ಆಸರೆ ಆಸ್ಪತ್ರೆ ವಿರುದ್ಧ ಕಠಿಣ ಕ್ರಮ: ದಿನೇಶ್ ಗುಂಡೂರಾವ್

ಯಾದಗಿರಿ: ನೆಲಮಂಗಲದ ಆಸರೆ ಆಸ್ಪತ್ರೆಯಲ್ಲಿ ಹೆಣ್ಣು ಭ್ರೂಣ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.

ಯಾದಗಿರಿಯಲ್ಲಿ ಮಾತನಾಡಿದ ಅವರು, ಆಸ್ಪತ್ರೆ ಮಾಲಿಕ ಡಾ. ರವಿಕುಮಾರ್ ನಾಪತ್ತೆಯಾಗಿರುವ ಮಾಹಿತಿ ಇದೆ. ಕಠಿಣ ಕ್ರಮ ಕೈಗೊಂಡಿದ್ದರಿಂದ ಇಂತಹ ಪ್ರಕರಣಗಳು ಹೊರಬರಲು ಸಾಧ್ಯವಾಗಿದೆ. ಮಾಹಿತಿ ಬಂದರೆ ಎಲ್ಲೆಡೆ ತನಿಖೆ ನಡೆಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನಮ್ಮ ಇಲಾಖೆಯ ಕಾರ್ಯಾಚರಣೆಯಿಂದಲೇ ಇಂತಹ ಕೇಸ್ ಹೊರಗೆ ಬಂದಿದೆ. ಸಂಪೂರ್ಣ ತನಿಖೆಯಾಗುತ್ತದೆ. ತಪ್ಪು ಗೊತ್ತಾದಲ್ಲಿ ಖಂಡಿತ ಕ್ರಮ ಕೈಗೊಳ್ಳುತ್ತೇವೆ. ಹೆಣ್ಣು ಭ್ರೂಣ ಹತ್ಯೆ ಮಾಡುವುದು ಅತ್ಯಂತ ನೋವಿನ, ಶೋಚನೀಯ ಸಂಗತಿ. ಹೆಣ್ಣು ಮಗು ಬೇಡ ಎನ್ನುವುದು ಸಮಾಜದ ಕೆಟ್ಟ ವ್ಯವಸ್ಥೆಯಾಗಿದೆ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಬಂದ ಬಳಿಕ ಸಾಕಷ್ಟು ಕ್ರಮ ಕೈಗೊಳ್ಳಲಾಗಿದೆ. ರಾಜ್ಯಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಿದ್ದೇವೆ. ಕಠಿಣ ಕ್ರಮ ಕೈಗೊಳ್ಳುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular