HomeEntertainmentBREAKING: ಗಾಯಕಿ ಆಶಾ ಭೋಸ್ಲೆ ನಿಧನ: ನಾಳೆ ಸಂಜೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಅಂತ್ಯಕ್ರಿಯೆ

BREAKING: ಗಾಯಕಿ ಆಶಾ ಭೋಸ್ಲೆ ನಿಧನ: ನಾಳೆ ಸಂಜೆ ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಅಂತ್ಯಕ್ರಿಯೆ

ಮುಂಬೈ: ಭಾರತೀಯ ಚಿತ್ರರಂಗದ ಹಿರಿಯ ಗಾಯಕಿ ಆಶಾ ಭೋಸ್ಲೆ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಹಿರಿಯ ಗಾಯಕಿಯ ನಿಧನಕ್ಕೆ ಇಡೀ ಭಾರತೀಯ ಚಿತ್ರರಂಗವೇ ಕಂಬನಿ ಮಿಡಿದಿದೆ.

ಆಶಾ ಭೋಸ್ಲೆ ಅವರಿಗೆ ನಿನ್ನೆ ಹೃದಯಾಘಾತ ಸಂಭವಿಸಿತ್ತು. ತಕ್ಷಣ ಅವರನ್ನು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಕೊನೆಯುಸಿರೆಳೆದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಶಾ ಭೋಸ್ಲೆ ಅವರು ಬಹು ಅಂಗಾಗ ವೈಫಲ್ಯದಿಂದಾಗಿ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಖ್ಯಾತ ಹಿನ್ನೆಲೆ ಗಾಯಕಿಯನ್ನು ಕಳೆದುಕೊಂಡು ಭಾರತೀಯ ಚಿತ್ರರಂಗ ಶೋಕಸಾಗರದಲ್ಲಿ ಮುಳುಗಿದೆ.

ಆಶಾ ಭೋಸ್ಲೆ ನಿಧ ಹಿನ್ನೆಲೆಯಲ್ಲಿ ನಾಳೆ ಅವರ ಅಂತ್ಯಕ್ರಿಯೆ ನಡೆಯಲಿದೆ. ನಾಳೆ ಏಪ್ರಿಲ್ 13ರಂದು ಮುಂಬೈನ ಶಿವಾಜಿ ಪಾರ್ಕ್ ನಲ್ಲಿ ಸಂಜೆ 4 ಗಂಟೆಗೆ ಅಂತ್ಯಕ್ರಿಯೆ ನೆರವೇರಿಸಲಾಗುವುದು ಎಂದು ಅವರ ಕುಟುಂಬ ಮೂಲಗಳು ತಿಳಿಸಿವೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular