HomeKarnataka15 ಸಾವಿರ ರೂ. ವೇತನಕ್ಕೆ ಆಗ್ರಹಿಸಿ 2 ಸಾವಿರಕ್ಕೂ ಅಧಿಕ 'ಆಶಾ ಕಾರ್ಯಕರ್ತೆ'ಯರಿಂದ ಅಹೋರಾತ್ರಿ ಹೋರಾಟ:...

15 ಸಾವಿರ ರೂ. ವೇತನಕ್ಕೆ ಆಗ್ರಹಿಸಿ 2 ಸಾವಿರಕ್ಕೂ ಅಧಿಕ ‘ಆಶಾ ಕಾರ್ಯಕರ್ತೆ’ಯರಿಂದ ಅಹೋರಾತ್ರಿ ಹೋರಾಟ: ರಾಜ್ಯದ ಮೂಲೆ ಮೂಲೆಯಿಂದ ಭಾಗಿ

ಬೆಂಗಳೂರು: 7,000 ರೂ. ಗೌರವಧನ ಒಪ್ಪದ ಆಶಾ ಕಾರ್ಯಕರ್ತೆಯರು ಅಹೋರಾತ್ರಿ ಹೋರಾಟ ಮುಂದುವರೆಸಿದ್ದಾರೆ.

ಫ್ರೀಡಂ ಪಾರ್ಕ್ ನಲ್ಲಿ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ಕೈಗೊಳ್ಳಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ಆಶಾ ಕಾರ್ಯಕರ್ತೆಯರಿಗೆ ಮಾಸಿಕ ಗೌರವದನವನ್ನು 7,000 ರೂ.ಗೆ ಹೆಚ್ಚಳ ಮಾಡಿ ನೇರ ವರ್ಗಾವಣೆಗೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ. ಇದನ್ನು ಒಪ್ಪದ ಆಶಾ ಕಾರ್ಯಕರ್ತೆಯರು ಹೋರಾಟ ಮುಂದುವರೆಸಿದ್ದಾರೆ.

ಫೆಬ್ರವರಿ 16ರಂದು ರಾಜ್ಯ ಬಜೆಟ್ ಮಂಡನೆ ಹಿನ್ನೆಲೆಯಲ್ಲಿ ಫ್ರೀಡಂ ಪಾರ್ಕ್ ನಲ್ಲಿ ಆಶಾ ಕಾರ್ಯಕರ್ತೆಯರಿಂದ ಅಹೋರಾತ್ರಿ ಹೋರಾಟ ನಡೆಸಲಾಗಿದ್ದು, ಈ ಬಜೆಟ್ ನಲ್ಲಾದರೂ ತಮ್ಮ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯದ ಮೂಲೆ ಮೂಲೆಯಿಂದ ಆಶಾ ಕಾರ್ಯಕರ್ತೆಯರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ. ಅಹೋರಾತ್ರಿ ಹೋರಾಟದಲ್ಲಿ 2000ಕ್ಕೂ ಹೆಚ್ಚು ಕಾರ್ಯಕರ್ತೆಯರು ಭಾಗಿಯಾಗಿದ್ದಾರೆ. ಸರ್ಕಾರ ಲಿಖಿತ ಭರವಸೆ ನೀಡಬೇಕು ಎಂದು ಆಶಾ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

15,000 ರೂ. ವೇತನ, ಆರ್‌ಸಿಎಚ್ ಪೋರ್ಟಲ್ ಸಮಸ್ಯೆ ನಿವಾರಣೆ, ಗಂಭೀರ ಕಾಯಿಲೆಗೆ ಒಳಗಾದ ಕಾರ್ಯಕರ್ತರಿಗೆ ವೇತನ ಸಹಿತ ರಜೆ ನೀಡಬೇಕು. ಮೊಬೈಲ್ ಆಧಾರಿತ ಕೆಲಸ ಮಾಡಿಸಬಾರದು, ಡೈರಿ, ಸಮವಸ್ತ್ರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular