HomeLatest Newsಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ: ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ: ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಸಿಎಂ ಸಿದ್ದರಾಮಯ್ಯ ಸಂತಾಪ

ಬೆಂಗಳೂರು: ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದು, ಗಣ್ಯಾತಿ ಗಣ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಭಾರತೀಯ ಚಿತ್ರರಂಗದ ಖ್ಯಾತ ಹಿನ್ನೆಲೆ ಗಾಯಕಿ ಆಶಾ ಭೋಸ್ಲೆ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಕಳೆದ ಹಲವು ದಶಕಗಳಿಂದ ಸುಮಾರು 12,000ಕ್ಕೂ ಅಧಿಕ ಹಾಡುಗಳ ಮೂಲಕ ಸಂಗೀತ ಪ್ರಿಯರನ್ನು ರಂಜಿಸಿದ ಸ್ವರ ಸಾಮ್ರಾಜ್ಞಿಯನ್ನು ಕಳೆದುಕೊಂಡು ಚಿತ್ರರಂಗ ಬಡವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕಂಬನಿ ಮಿಡಿದಿದ್ದಾರೆ.

ತಮ್ಮ ಸುಮಧುರ ಧ್ವನಿ, ಸರಳ ನಡೆ ನುಡಿ, ವಾತ್ಸಲ್ಯ ತುಂಬಿದ ಮಾತುಗಳಿಂದ ಅವರು ಜನಮಾನಸದಲ್ಲಿ ಶಾಶ್ವತ. ಆಶಾ ಭೋಸ್ಲೆಯವರ ನಿಧನದಿಂದ ಹಳೆಯ ಮತ್ತು ಹೊಸ ತಲೆಮಾರಿನ ಸಂಗೀತದ ಬಹುದೊಡ್ಡ ಕೊಂಡಿಯೊಂದು ಕಳಚಿದಂತಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮೃತರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ಬಂಧು ಮಿತ್ರರು ಹಾಗೂ ಅಭಿಮಾನಿ ಬಳಗಕ್ಕೆ ಈ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದೇ ವೇಳೆ ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಗಾಯಕಿ ಆಶಾ ಬೋಸ್ಲೆ ಅಗಲಿಕೆಗೆ ಕಂಬನಿ ಮಿಡಿದಿದ್ದಾರೆ. ಆಶಾ ಭೋಸ್ಲೆ ಅವರ ನಿಧನದಿಂದಾಗಿ ತೀವ್ರ ದುಃಖವಾಗಿದೆ. ಅವರು ಭಾರತೀಯ ಸಂಗೀತದಲ್ಲಿ ಬಹುಮುಖತೆಯನ್ನು ಮರುವ್ಯಾಖ್ಯಾನಿಸಿದ್ದಾರೆ. ತಲೆಮಾರುಗಳಾದ್ಯಂತ ಅಸಂಖ್ಯತ ಮರೆಯಲಗದ ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಎಂದಿಗೂ ಮಸುಕಾಗದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅವರ ಕುಟುಂಬಕ್ಕೆ ನನ್ನ ಸಂತಾಪಗಳು ಎಂದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular