HomeKarnatakaಕೆಪಿಎಸ್‌ಸಿ ಹಗರಣದಲ್ಲಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗುತ್ತೆ: ಹೊಸ...

ಕೆಪಿಎಸ್‌ಸಿ ಹಗರಣದಲ್ಲಿ ಸರ್ಕಾರದ ಮತ್ತೊಂದು ವಿಕೆಟ್ ಪತನವಾಗಲಿದೆ: ಸಚಿವ ಪ್ರಿಯಾಂಕ್‌ ಖರ್ಗೆ ರಾಜೀನಾಮೆ ಆಗುತ್ತೆ: ಹೊಸ ಬಾಂಬ್ ಸಿಡಿಸಿದ ಆರ್.ಅಶೋಕ್

ಬಳ್ಳಾರಿ: ಕೆಪಿಎಸ್‌ಸಿ ಹಗರಣದಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯಾಗಲಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೊಸ ಬಾಂಬ್ ಸಿಡಿಸಿದ್ದಾರೆ.

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಆರ್.ಅಶೋಕ್, ವಾಲ್ಮೀಕಿ ನಿಗಮದ ಹಗರಣದಲ್ಲಿ ನಾಗೇಂದ್ರ ರಾಜೀನಾಮೆ ಬಳಿಕ ಸರ್ಕಾರದ ಮತ್ತೊಂದು ವಿಕೇಟ್ ಪತನವಾಗಲಿದೆ. ಕೆಪಿಎಸ್‌ಸಿ ಹಗರಣದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆ ವಿಕೇಟ್ ಪತನವಾಗುತ್ತದೆ ಎಂದರು.

ಕೆಪಿಎಸ್ ಸಿ ಹಗರಣದಲ್ಲಿ ಸರ್ಕಾರದ ಹಲವು ಸಚಿವರು ಭಾಗಿಯಾಗಿದ್ದಾರೆ. ಮುಖ್ಯವಾಗಿ ಪ್ರಿಯಾಂಕ್ ಖರ್ಗೆ ರಾಜೀನಾಮೆ ನೀಡುತ್ತಾರೆ ಎಂದರು. ವಾಲ್ಮೀಕಿ ಅಭಿವೃದ್ಧಿ ನಿಗಮ ಹಗರಣ, ಬರ, ಕೆಪಿಎಸ್ ಸಿ ಹಗರಣ ಸೇರಿದಂತೆ ಹಲವು ವಿಚಾರಗಳನ್ನಿಟ್ಟು ಕೊಂಡು ಪಾದಯಾತ್ರೆ ಮಾಡ್ತಿದ್ದೇವೆ. ವಾಲ್ಮೀಕಿ ಹಗರಣದಲ್ಲಿ ಈಗಾಗಲೇ ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ನಾಗೇಂದ್ರ ರಾಜೀನಾಮೆ ವಿಚಾರದಲ್ಲಿ ಸದನದಲ್ಲಿ ಹೋರಾಟ ಮಾಡಿದ್ದೇವೆ. ಈ ಕಾರಣಕ್ಕೆ ಇವತ್ತು ನಾಗೇಂದ್ರ ರಾಜೀನಾಮೆ ಕೊಟ್ಟಿದ್ದಾರೆ. ವಾಲ್ಮೀಕಿ ನಿಗಮದ ಹಣ ಬಡವರಿಗೆ ಸೇರಬೇಕು. ಅಲ್ಲಿವರೆಗೂ ನಾವು ಹೋರಾಟ ಮಾಡ್ತೆವೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಸವರಾಜ ರಾಯರೆಡ್ಡಿ ಇಸ್ಲಾಂ ಧರ್ಮದ ಪರ ಇದ್ದಾರೆ. ಉಳಿದ ಧರ್ಮಗಳು, ಧರ್ಮಗಳೆ ಅಲ್ವಾ? ಬಸವರಾಜ ರಾಯರೆಡ್ಡಿ ಕೂಡ ಸಂಪುಟದಲ್ಲಿರಲು ಅರ್ಹರಲ್ಲ. ಬಸವರಾಜ್ ರಾಯರೆಡ್ಡಿ ರಾಜೀನಾಮೆ ನೀಡಬೇಕು. ಇಲ್ಲಾ ಕಾಂಗ್ರೆಸ್ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದರು.

ಪಾದಯಾತ್ರೆಯಲ್ಲಿ ಜೆಡಿಎಸ್ ಭಾಗಿಯಾಗದೇ ಇರೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಆರ್. ಅಶೋಕ್, ನಾನು ಹೆಚ್‌.ಡಿ.ಕುಮಾರಸ್ವಾಮಿ ಅವರ ಬಳಿ ಮಾತನಾಡುತ್ತೇನೆ. ನಮ್ಮ ಮೈತ್ರಿಯಲ್ಲಿ ಯಾವುದೇ ಸಮಸ್ಯೆ ಇಲ್ಲ. ನಾವು ಎನ್ ಡಿಎ ಮೈತ್ರಿಕೂಟವಾಗಿಯೇ ಕೆಲಸ ಮಾಡುತ್ತಿದ್ದೇವೆ. ಯಾವುದೇ ಗೊಂದಲವಿಲ್ಲ. ಪಾದಯಾತ್ರೆಗೆ ಟಕ್ಕರ್ ಕೊಡಲು ಬಳ್ಳಾರಿಯಲ್ಲಿ ಕಾಂಗ್ರೆಸ್ ಶಾಸಕರು, ಸಂಸದರು ಸುದ್ದಿಗೋಷ್ಠಿ ಮಾಡಲಿ, ಯಾರೂ ಬೇಡ ಅಂದರು. ದಲಿತರ ದುಡ್ಡು ತಿಂದಿಲ್ವಾ? ಆತ್ಮಸಾಕ್ಷಿಗೆ ಅನುಗುಣವಾಗಿ ಕೆಲಸ ಮಾಡಲಿ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular