HomeKarnatakaBIG NEWS: ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ : ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

BIG NEWS: ಮೋಸ ನಿಲ್ಲಿಸಿ, ಗ್ಯಾರಂಟಿ ಜಾರಿಗೊಳಿಸಿ : ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ

ಬೆಂಗಳೂರು: ನುಡಿದಂತೆ ನಡೆಯದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಬಿಜೆಪಿ ಸಜ್ಜಾಗಿದ್ದು, ನಾಳೆ ಜುಲೈ 3ರಿಂದ ಪ್ರತಿಭಟನೆ ನಡೆಸಲಿದೆ.

ಮೋಸ ನಿಲ್ಲಿಸಿ ಗ್ಯಾರಂಟಿ ಜಾರಿಗೊಳಿಸಿ ಎಂಬ ಶೀರ್ಷಿಕೆ ಅಡಿಯಲ್ಲಿ ಬಿಜೆಪಿ ಹೋರಾಟ ನಡೆಸಲಿದೆ. ಸದನದ ಒಳಗೂ ಹಾಗೂ ಹೊರಗು ಬಿಜೆಪಿ ಶಾಸಕರು, ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ ಎಂದು ಮಾಜಿ ಸಚಿವ ಅಶ್ವತ್ಥನಾರಾಯಣ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನರಿಗೆ ಗ್ಯಾರಂಟಿ ಭರವಸೆ ಕೊಟ್ಟು ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಅಧಿಕಾರಕ್ಕೆ ಬಂದ ಮೇಲೆ ಗ್ಯಾರಂಟಿ ಜಾರಿಗೊಳಿಸುವುದಾಗಿ ಹೇಳಿದ್ದರು. ಈಗ ಅಧಿಕಾರಕ್ಕೆ ಬಂದು ಇಷ್ಟು ದಿನವಾದರೂ ಯೋಜನೆ ಜಾರಿಗೊಳಿಸುತ್ತಿಲ್ಲ, ಕೊಟ್ಟ ಮಾತಿಗೆ ಸರ್ಕಾರ ತಪ್ಪಿದೆ. ಹಾಗಾಗಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಿದೆ. ಜುಲೈ 4ರಂದು ಫ್ರೀಡಂ ಪಾರ್ಕ್ ನಲ್ಲಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಹೋರಾಟ ನಡೆಯಲಿದೆ ಎಂದರು.

For Latest News Updates, Join Our Whatsapp Community🚩
RELATED ARTICLES

Most Popular