HomeKarnatakaಸಿದ್ಧರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್

ಸಿದ್ಧರಾಮಯ್ಯರನ್ನು ಹೊಡೆದು ಹಾಕಿ ಎಂದು ಹೇಳಿದ್ದ ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್

ಮೈಸೂರು: ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದ ಮಾಜಿ ಡಿಸಿಎಂ ಡಾ.ಸಿ.ಎನ್. ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಫೆಬ್ರವರಿ ತಿಂಗಳಿನಲ್ಲಿ ಅಶ್ವತ್ಥ್ ನಾರಾಯಣ ನೀಡಿದ ಹೇಳಿಕೆ ವಿರುದ್ಧ ಈಗ ಮೈಸೂರಿನ ದೇವರಾಜ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 16 ರಂದು ಅಶ್ವತ್ಥ್ ನಾರಾಯಣ ಅವರು, ಟಿಪ್ಪು ಹೊಡೆದು ಹಾಕಿದಂತೆ ಸಿದ್ದರಾಮಯ್ಯ ಅವರನ್ನು ಹೊಡೆದು ಹಾಕಿ ಎಂದು ಹೇಳಿಕೆ ನೀಡಿದ್ದು, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ ಅವರು ಮೈಸೂರಿನ ದೇವರಾಜ ಠಾಣೆಗೆ ದೂರು ನೀಡಿದ್ದರು. ಅಂದಿನಿಂದ ದೂರಿನ ಬಗ್ಗೆ ಪೊಲೀಸರು ಯಾವುದೇ ಕ್ರಮ ಕೈಗೊಂಡಿರಲಿಲ್ಲ. ಇಂದು ಠಾಣೆಗೆ ತೆರಳಿ ಮತ್ತೆ ಲಕ್ಷ್ಮಣ ದೂರು ಸಲ್ಲಿಸಿದ್ದು, ಅವರು ನೀಡಿದ ದೂರಿನ ಅನ್ವಯ ಅಶ್ವತ್ಥ್ ನಾರಾಯಣ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular