HomeKarnatakaBIG NEWS: ಕಾಂಗ್ರೆಸ್ ನಿಂದ ಕೆಲವರ ಬ್ಲ್ಯಾಕ್ ಮೇಲ್; ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸಬೇಕಿಲ್ಲ...

BIG NEWS: ಕಾಂಗ್ರೆಸ್ ನಿಂದ ಕೆಲವರ ಬ್ಲ್ಯಾಕ್ ಮೇಲ್; ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸಬೇಕಿಲ್ಲ ಎಂದ ಶಾಸಕ ಡಾ.ಅಶ್ವತ್ಥನಾರಾಯಣ

ಬೆಂಗಳೂರು: ಶಾಸಕ ಬಿ.ಸಿ.ಪಾಟೀಲ್, ಮಾಜಿ ಶಾಸಕ ರಾಜು ಗೌಡ, ಡಿಸಿಎಂ ಡಿ.ಕೆ.ಶಿವಕುಮಾರ್ ಭೇಟಿ ವಿಚಾರವಾಗಿ ಪ್ರತಿಕ್ರಿಯಿಸಿರುವ ಮಾಜಿ ಸಚಿವ ಡಾ.ಅಶ್ವತ್ಥನಾರಾಯಣ, ಇಂಥ ಭೇಟಿಗೆಲ್ಲ ಬೇರೆ ಅರ್ಥ ಕಲ್ಪಿಸುವುದು ಬೇಡ ಎಂದಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅಶ್ವತ್ಥನಾರಾಯಣ, ರಾಜಕೀಯದಲ್ಲಿ ಒಬ್ಬರಿಗೊಬ್ಬರು ಪರಿಚಯದವರಿರುತ್ತಾರೆ. ಭೇಟಿಯಾದ ಮಾತ್ರಕ್ಕೆ ಆಪರೇಷನ್ ಹಸ್ತ ಎಂಬ ರೀತಿ ಬೇರೆ ಅರ್ಥ ಕಲ್ಪಿಸುವ ಅಗತ್ಯವಿಲ್ಲ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಾಂಗ್ರೆಸ್ ಮುಳುಗುವ ಹಡಗು. ಆ ಪಕ್ಷಕ್ಕೆ ಭವಿಷ್ಯವಿಲ್ಲ. ಕಾಂಗ್ರೆಸ್ ನವರು ಕೆಲವರ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ. ಅವರ ಬ್ಲ್ಯಾಕ್ ಮೇಲ್ ವಿಫಲವಾಗುತ್ತದೆ ಎಂದು ಕಿಡಿಕಾರಿದರು.

For Latest News Updates, Join Our Whatsapp Community🚩
RELATED ARTICLES

Most Popular