ಗದಗ: ಗದಗ ಶಹರ ಠಾಣೆ ಎಎಸ್ಐ ಪೊಲೀಸ್ ಠಾಣೆಯಲ್ಲೇ ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಚನ್ನಬಸಪ್ಪ ಇಂಗಳಳ್ಳಿ ಲೋಕಾಯುಕ್ತ ಬಲೆಗೆ ಬಿದ್ದವರು. ಪಿಟಿಷನ್ ಅರ್ಜಿ ವಿಚಾರಣೆಗಾಗಿ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿ ಲಂಚದ ಹಣದ ಸಹಿತ ಎಎಸ್ಐ ಚನ್ನಬಸಪ್ಪ ಅವರನ್ನು ವಶಕ್ಕೆ ಪಡೆದಿದ್ದಾರೆ.
ಗದಗ ಶಹರ ಪೊಲೀಸ್ ಠಾಣೆಯ ಎಎಸ್ಐ ಚನ್ನಬಸಪ್ಪ ಪಿಟಿಷನ್ ಅರ್ಜಿ ವಿಚಾರಣೆಗೆ 10 ಸಾವಿರ ರೂ.ಗೆ ಬೇಡಿಕೆ ಇಟ್ಟಿದ್ದರು. ಈ ಬಗ್ಗೆ ವೀರೇಶ್ ಪೂಜಾರ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಪೊಲೀಸ್ ಠಾಣೆಯಲ್ಲಿ 10 ಸಾವಿರ ರೂ. ಲಂಚ ಪಡೆಯುವಾಗ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ವಿಜಯ ಬಿರಾದಾರ ನೇತೃತ್ವದಲ್ಲಿ ಲೋಕಾಯುಕ್ತ ಪೊಲೀಸ್ ಸಿಬ್ಬಂದಿ ಕಾರ್ಯಾಚರಣೆ ನಡೆಸಿದ್ದಾರೆ.

