HomeKarnatakaವ್ಯಕ್ತಿಯನ್ನು ಅಕ್ರಮವಾಗಿ ಇರಿಸಿಕೊಂಡು ಹಣಕ್ಕೆ ಬೇಡಿಕೆ: ಎಎಸ್ಐ ಸೇರಿ ನಾಲ್ವರು ಅಮಾನತು

ವ್ಯಕ್ತಿಯನ್ನು ಅಕ್ರಮವಾಗಿ ಇರಿಸಿಕೊಂಡು ಹಣಕ್ಕೆ ಬೇಡಿಕೆ: ಎಎಸ್ಐ ಸೇರಿ ನಾಲ್ವರು ಅಮಾನತು

ಬೆಂಗಳೂರು: ಕರ್ತವ್ಯಲೋಪ ಆರೋಪದ ಮೇರೆಗೆ ರಾಮಮೂರ್ತಿ ನಗರ ಪೊಲೀಸ್ ಠಾಣೆಯ ಎಎಸ್ಐ ಗುಣಶೇಖರ್ ಹಾಗೂ ಮೂವರು ಕಾನ್ಸ್ಟೇಬಲ್ ಗಳನ್ನು ಅಮಾನತು ಮಾಡಲಾಗಿದೆ.

ವ್ಯಕ್ತಿಯೊಬ್ಬರನ್ನು ಅಕ್ರಮವಾಗಿ 7 ದಿನ ಠಾಣೆಯಲ್ಲಿ ಇರಿಸಿಕೊಂಡು ವಿವಿಧೆಡೆ ಸುತ್ತಾಟ ನಡೆಸಿದ ಆರೋಪ ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ಎಎಸ್ಐ ಸೇರಿ ನಾಲ್ವರನ್ನು ಅಮಾನತು ಮಾಡಲಾಗಿದೆ.

ಕೇರಳದ ರಾಜೀವ್ ಕಾರ್ ಮಾರಾಟಕ್ಕೆ ಮುಂದಾಗಿದ್ದು, ಕಳವು ಮಾಡಿದ ಕಾರ್ ಮಾರಾಟ ಮಾಡುತ್ತಿರುವ ಆರೋಪದ ಮೇಲೆಗೆ ಪೊಲೀಸರು ಅವರನ್ನು ವಶಕ್ಕೆ ಪಡೆದು ಠಾಣೆಗೆ ಕರೆದುಕೊಂಡು ಬಂದು ಹಣಕ್ಕೆ ಬೇಡಿಕೆ ಇಟ್ಟಿದ್ದರು. ಸುಳ್ಳು ಹೇಳಿ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಆರೋಪಿಸಿ ರಾಜೀವ್ ಕುಟುಂಬದವರು ಮಾನವ ಹಕ್ಕುಗಳ ಆಯೋಗದ ಮೊರೆ ಹೋಗಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಯೋಗದ ಅಧಿಕಾರಿಗಳು ಠಾಣೆಯ ಮೇಲೆ ದಾಳಿ ಮಾಡಿದಾಗ ರಾಜೀವ್ ಅವರನ್ನು ಹಿಂಬದಿ ಬಾಗಿಲ ಮೂಲಕ ಪೊಲೀಸರು ಹೊರಗೆ ಕಳಿಸಿದ್ದರು. ಸಿಸಿಟಿವಿ ಕ್ಯಾಮೆರಾಗಳನ್ನು ಪರಿಶೀಲಿಸಿದಾಗ ಅಕ್ರಮವಾಗಿ ಬಂಧಿಸಿರುವುದು ಪತ್ತೆಯಾಗಿತ್ತು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular