ಕೊಪ್ಪಳ: ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯ ನಿರತ ಎಎಸ್ಐ ಸಾವನ್ನಪ್ಪಿದ ಘಟನೆ ಕೊಪ್ಪಳ ತಾಲೂಕಿನ ಒಣಬಳ್ಳಾರಿ ಬಳಿ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ನಡೆದಿದೆ.
ಮುನಿರಾಬಾದ್ ಪೊಲೀಸ್ ಠಾಣೆಯ ಎಎಸ್ಐ ರಾಮಣ್ಣ(55) ಮೃತಪಟ್ಟವರು. ಹೆದ್ದಾರಿ ಗಸ್ತು ವಾಹನದಲ್ಲಿ ರಾಮಣ್ಣ ಕರ್ತವ್ಯ ನಿರ್ವಹಿಸುತ್ತಿದ್ದರು. ರಾತ್ರಿ ಅಪರಿಚಿತ ವಾಹನ ಡಿಕ್ಕಿಯಾಗಿ ಕರ್ತವ್ಯದಲ್ಲಿದ್ದ ರಾಮಣ್ಣ ಸಾವನ್ನಪ್ಪಿದ್ದಾರೆ. ಮುನಿರಾಬಾದ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.

 
			 
		 
		 
		 
		 Loading ...
 Loading ... 
		 
		 
		