HomeKarnatakaBREAKING: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಬಹುಮಾನ ಹೆಚ್ಚಿಸಿದ ರಾಜ್ಯ ಸರ್ಕಾರ

BREAKING: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಬಹುಮಾನ ಹೆಚ್ಚಿಸಿದ ರಾಜ್ಯ ಸರ್ಕಾರ

ಬೆಂಗಳೂರು: ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ರಾಜ್ಯ ಸರ್ಕಾರ ಮತ್ತಷ್ಟು ಗುಡ್ ನ್ಯೂಸ್ ನೀಡಿದೆ. ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಸರ್ಕಾರ ನಗದು ಬಹುಮಾನ ಹೆಚ್ಚಿಸಿದೆ.

ಚಿನ್ನ ಗೆದ್ದ ಕ್ರೀಡಾಪಟುಗಳಿಗೆ 1 ಕೋಟಿ ರೂ.ಗೆ ನಗದು ಬಹುಮಾನ ಮೊತ್ತವನ್ನು ಹೆಚ್ಚಿಸಿದೆ. ಬೆಳ್ಳಿ ಪದಕ ವಿಜೇತರಿಗೆ 75 ಲಕ್ಷ ರೂಪಾಯಿ ಹಾಗೂ ಕಂಚಿನ ಪದಕ ವಿಜೇತರಿಗೆ 50 ಲಕ್ಷ ರೂಪಾಯಿ. ಬಹುಮಾನವನ್ನು ಹೆಚ್ಚಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರ ಇಂದೇ ಅಧಿಕೃತವಾಗಿ ಘೋಷಣೆ ಮಾಡಲಿದೆ ಎಂದು ತಿಳಿದುಬಂದಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಏಷ್ಯನ್ ಗೇಮ್ ಪದಕ ವಿಜೇತರಿಗೆ ಬಹುಮಾನ ಹೆಚ್ಚಳ ಮಾಡುವಂತೆ ವಿಧಾನ ಪರಿಷತ್ ಕಾಂಗ್ರೆಸ್ ಸದಸ್ಯ ದಿನೇಶ್ ಗೂಳಿಗೌಡ ಸಿಎಂ ಡಿ.ಕೆ.ಶಿವಕುಮಾರ್ ಹಾಗೂ ಡಿಸಿರೆಂ ಪರಮ್ರ‍ೇಶ್ವರ್ ಅವರಿಗೆ ಪತ್ರ ಬರೆದಿದ್ದರು.

ಅಲ್ಲದೇ ಈ ಬಾರಿ ಏಷ್ಯನ್ ಗೇಮ್ ಗೆದ್ದ 8 ಮಂದಿ ಸಾಧಕರಿಗೆ ವಿಧಾನಸೌಧದ ಬ್ಯಾಂಕ್ವೇಟ್ ಹಾಲ್ ನಲ್ಲಿ ಸರ್ಕಾರದ ವತಿಯಿಂದ ಗೌರವ ಸಲ್ಲಿಸಬೇಕು. ಈ ಸಾಧಕರಿಗೆ ಮುಂಬರುವ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯ ಆಯ್ಕೆಯಲ್ಲಿ ವಿಶೇಷ ಆದ್ಯತೆ ನೀಡುವಂತೆ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ ರಾಜ್ಯ ಸರ್ಕಾರ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ನಗದು ಬಹುಮಾನ ಮೌಲ್ಯ ಹೆಚ್ಚಳ ಮಾಡಿದೆ.

ಜಯನಗರದಲ್ಲಿ ಫಾರಂ-7 ದುರ್ಬಳಕೆ ಆರೋಪ: ಐವರ ವಿರುದ್ಧ FIR ದಾಖಲು

ಬೆಂಗಳೂರು: ಬೆಂಗಳೂರಿನ ಜಯನಗರ ವಿಧಾನಸಭಾ ಕ್ಷೇತ್ರದಲ್ಲಿ ಫಾರಂ-7 ದುರ್ಬಳಕೆ ಮಾಡಿ ಮತದಾರರ ಹೆಸರುಗಳನ್ನು ಡಿಲಿಟ್ ಮಾಡಲು ಯತ್ನಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಸಂಬಂಧ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಹಾಗೂ ಮಾಜಿ ಶಾಸಕಿ ಸೌಮ್ಯಾ ರೆಡ್ಡಿ ನೀಡಿದ ದೂರಿನ ಆಧಾರದ ಮೇಲೆ ಜಯನಗರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಲು ಅಥವಾ ಹೆಸರನ್ನು ಸೇರಿಸುವುದನ್ನು ಆಕ್ಷೇಪಿಸಲು ಇರುವ ಅರ್ಜಿಯಾಗಿರುವ ಫಾರ್ಮ್‌ 7 ನ್ನು ಕ್ಷೇತ್ರದಲ್ಲಿ ವ್ಯಾಪಕವಾಗಿ ಬಳಕೆ ಮಾಡಲಾಗುತ್ತಿದೆ. ಜಯನಗರದಲ್ಲಿ ಒಟ್ಟು 5,698 ಮತದಾರರ ಹೆಸರುಗಳನ್ನ ಪಟ್ಟಿಯಿಂದ ಡಿಲೀಟ್ ಮಾಡಲು ಫಾರಂ-7 ಅರ್ಜಿಗಳನ್ನ ಸಲ್ಲಿಸಿರುವ ಬಗ್ಗೆ ಸೌಮ್ಯಾ ರೆಡ್ಡಿ ಅನುಮಾನ ವ್ಯಕ್ತಪಡಿಸಿದ್ದಾರೆ. ಈ ಅರ್ಜಿಗಳ ಹಿಂದೆ ಉದ್ದೇಶಪೂರ್ವಕವಾಗಿ ಮತದಾರರ ಹೆಸರುಗಳನ್ನ ಅಳಿಸುವ ಪ್ರಯತ್ನ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.

ಅರ್ಜಿಗಳಲ್ಲಿ ಸಿ. ರಮೇಶ್ ಮತ್ತು ರೂಪಾ ಎಂಬುವವರ ಹೆಸರನ್ನ ಬಳಸಲಾಗಿದೆ. ಆದರೆ, ತಮ್ಮ ಯಾವುದೇ ಮಾಹಿತಿ ಅಥವಾ ಒಪ್ಪಿಗೆಯಿಲ್ಲದೆ ತಮ್ಮ ವೈಯಕ್ತಿಕ ಮಾಹಿತಿಯನ್ನ ನಕಲು ಮಾಡಿ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂದೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಡಿಯೋ ದಾಖಲೆಗಳೂ ಇವೆ ಎಂದು ದೂರಿನಲ್ಲಿ ತಿಳಿಸಿದ್ದಾರೆ.

ಯಾವ ವಾರ್ಡ್‌ನಲ್ಲಿ ಎಷ್ಟು ಹೆಸರು ಡಿಲೀಟ್‌?

ವಾರ್ಡ್ 168 – ಹಲಸೂರು: 54 ಮತದಾರರು

ವಾರ್ಡ್ 169 – ಬೈರಸಂದ್ರ: 525 ಮತದಾರರು

ವಾರ್ಡ್ 170 – ಬೈರಸಂದ್ರ: 719 ಮತದಾರರು

ವಾರ್ಡ್ 171 – ಗುರುಪ್ಪನಪಾಳ್ಯ: 4,327 ಮತದಾರರು

ವಾರ್ಡ್ 177, 178, 179 – ಜಯನಗರ: ಒಟ್ಟು 82 ಮತದಾರರು

ಪ್ರಕರಣದಲ್ಲಿ ಬಿಜೆಪಿ ಮುಖಂಡರಾದ ರಾಮಕೃಷ್ಣ, ಯೋಗೇಶ್ ಸೇರಿದಂತೆ ಒಟ್ಟು ಐವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ದೂರಿನಲ್ಲಿ ಜಯನಗರ ಶಾಸಕ ಸಿ.ಕೆ ರಾಮಮೂರ್ತಿ ಅವರ ಹೆಸರನ್ನೂ ಉಲ್ಲೇಖಿಸಲಾಗಿದೆ. ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಕೈಗೊಂಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

LEAVE A REPLY

Please enter your comment!
Please enter your name here

Most Popular