HomeIndiaಟಿಕೆಟ್ ನೀಡದ ಬಿಜೆಪಿ: ಕಾಂಗ್ರೆಸ್ ಸೇರಿದ ಸಚಿವೆ!

ಟಿಕೆಟ್ ನೀಡದ ಬಿಜೆಪಿ: ಕಾಂಗ್ರೆಸ್ ಸೇರಿದ ಸಚಿವೆ!

ಅಸ್ಸಾಂ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಮಾರ್ಚ್ 23ರ ಸೋಮವಾರ ಕೊನೆಯ ದಿನವಾಗಿದೆ. 126 ಸೀಟುಗಳ ವಿಧಾನಸಭೆಗೆ ಏಪ್ರಿಲ್ 9ರಂದು ಚುನಾವಣೆ ನಡೆಯಲಿದೆ. ಬಿಜೆಪಿ ಟಿಕೆಟ್ ನೀಡದ ಕಾರಣ ಸಚಿವೆ ಕಾಂಗ್ರೆಸ್ ಸೇರಿ ಅಚ್ಚರಿ ಮೂಡಿಸಿದ್ದಾರೆ.

ಅಸ್ಸಾಂನ ಸಚಿವೆ ನಂದಿತಾ ಗಾರ್ಲೋಸಾ ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾಗಿದ್ದಾರೆ. ಈ ಬಾರಿಯ ಚುನಾವಣೆಗೆ ಬಿಜೆಪಿಯಿಂದ ಅವರಿಗೆ ಟಿಕೆಟ್ ನಿರಾಕರಿಸಲಾಗಿತ್ತು. ಆದ ಕಾರಣ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

ಅಸ್ಸಾಂ ಚುನಾವಣೆಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದ ಬಿಜೆಪಿ ಕೊನೆಯ ಕ್ಷಣದ ಬೆಳವಣಿಗೆಯಲ್ಲಿ ಹಾಫ್ಲಾಂಗ್ ಕ್ಷೇತ್ರದ ಪಕ್ಷದ ಅಭ್ಯರ್ಥಿಯನ್ನು ಬದಲಾವಣೆ ಮಾಡಿತು. ಕ್ಷೇತ್ರದ ಹಾಲಿ ಶಾಸಕಿ ಹಾಗೂ ಡಿಮಾ ಹಸಾವೊ ಜಿಲ್ಲೆಯ ಜನಪ್ರಿಯ ನಾಯಕಿಯಾಗಿರುವ ಗರ್ಲೋಸಾ ಅವರಿಗೆ ಬಿಜೆಪಿಯಿಂದ ಟಿಕೆಟ್ ಸಿಗಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ ಕಾರಣ ಅವರು ಪಕ್ಷಾಂತರ ಮಾಡಿದ್ದಾರೆ. ಆಡಳಿತ ವಿರೋಧಿ ಅಲೆಯನ್ನು ಎದುರಿಸಲು ಹಲವು ಶಾಸಕರಿಗೆ ಟಿಕೆಟ್ ನಿರಾಕರಿಸುವ ತಂತ್ರದ ಭಾಗವಾಗಿ ಬಿಜೆಪಿ ನಂದಿತಾ ಗಾರ್ಲೋಸಾ ಅವರ ಬದಲು ರೂಪಾಲಿ ಲಂಗ್ಥಾಸಾ ಅವರನ್ನು ಕಣಕ್ಕಿಳಿಸಿದೆ.

ಭಾನುವಾರ ಬಿಡುಗಡೆಯಾದ ತನ್ನ 5ನೇ ಪಟ್ಟಿಯಲ್ಲಿ ಕಾಂಗ್ರೆಸ್ ಹಾಫ್ಲಾಂಗ್ ಕ್ಷೇತ್ರದಿಂದ ನಿರ್ಮಲ್ ಲಂಗ್ಥಾಸಾ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಿತ್ತು. ಆದರೆ, ಈಗ ಗರ್ಲೋಸಾ ಅವರ ಸೇರ್ಪಡೆಯ ನಂತರ, ಅವರನ್ನೇ ಕಣಕ್ಕಿಳಿಸುವ ಬಗ್ಗೆ ಪಕ್ಷ ಪರಿಶೀಲಿಸುತ್ತಿದೆ.

ಗುಡ್ಡಗಾಡು ಜಿಲ್ಲೆಯಲ್ಲಿ ಗರ್ಲೋಸಾ ಅವರ ಪ್ರಭಾವ ಹೆಚ್ಚಿದೆ. ಈ ನಾಯಕತ್ವವನ್ನು ಗಮನದಲ್ಲಿಟ್ಟುಕೊಂಡು ಕಾಂಗ್ರೆಸ್ ಅವರನ್ನು ಪಕ್ಷಕ್ಕೆ ಸೇರಿಸಿಕೊಂಡಿದೆ. ಪ್ರಮುಖ ಬುಡಕಟ್ಟು ಕ್ಷೇತ್ರದಲ್ಲಿ ಜನರು ಅವರಿಗೆ, ಪಕ್ಷಕ್ಕೆ ಹೆಚ್ಚಿನ ಬೆಂಬಲ ನೀಡಲಿದ್ದಾರೆ ಎಂಬ  ನಿರೀಕ್ಷೆಯಲ್ಲಿ ಪಕ್ಷವಿದೆ.

ಭಾನುವಾರ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಈ ಪ್ರದೇಶಕ್ಕೆ ಭೇಟಿ ನೀಡಿ ಬಿಜೆಪಿಯ ಪ್ರಚಾರವನ್ನು ಚುರುಕುಗೊಳಿಸಿದ್ದರು. ಬಳಿಕ ರಾಜಕೀಯ ಲೆಕ್ಕಾಚಾರಗಳು ಬದಲಾಗಿದ್ದು, ನಂದಿತಾ ಗಾರ್ಲೋಸಾ ಬಿಜೆಪಿ ತೊರೆದಿದ್ದಾರೆ. ಈ ಬೆಳವಣಿಗೆ ಬಳಿಕ ಬಿಜೆಪಿ ತನ್ನ ಚುನಾವಣಾ ತಂತ್ರವನ್ನು ಮರು ಪರಿಶೀಲಿಸುವಂತಾಗಿದೆ.

ಅಸ್ಸಾಂ ಎನ್‌ಡಿಎ ಸರ್ಕಾರದಲ್ಲಿ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಸಂಪುಟದಲ್ಲಿ ಗರ್ಲೋಸಾ ಗಣಿ, ಖನಿಜ ಮತ್ತು ಬುಡಕಟ್ಟು ಪಂಗಡಗಳ ಅಭಿವೃದ್ಧಿಯಂತಹ ಪ್ರಮುಖ ಖಾತೆಗಳನ್ನು ಹೊಂದಿದ್ದರು. ಅವರು ಬಿಜೆಪಿ ತೊರೆದಿದ್ದು, ಗುಡ್ಡಗಾಡು ಜಿಲ್ಲೆಯಲ್ಲಿ ಬಿಜೆಪಿಗೆ ಹಿನ್ನಡೆ ಎಂದೇ ಅಂದಾಜಿಸಲಾಗುತ್ತಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular