HomeIndiaBig News: ಡಿಕೆಶಿ ಉಸ್ತುವಾರಿ ಹೊತ್ತ ರಾಜ್ಯದ ಬಿಗ್ ಅಪ್‌ಡೇಟ್, ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಬಿಜೆಪಿಗೆ!

Big News: ಡಿಕೆಶಿ ಉಸ್ತುವಾರಿ ಹೊತ್ತ ರಾಜ್ಯದ ಬಿಗ್ ಅಪ್‌ಡೇಟ್, ಕಾಂಗ್ರೆಸ್ ಮಾಜಿ ರಾಜ್ಯಾಧ್ಯಕ್ಷ ಬಿಜೆಪಿಗೆ!

ವಿಧಾನಸಭೆ ಚುನಾವಣೆ ಹೊತ್ತಿನಲ್ಲಿಯೇ ಅಸ್ಸಾಂ ಕಾಂಗ್ರೆಸ್‌ನಲ್ಲಿ ಮಹತ್ವದ ಬೆಳವಣಿಗೆ ನಡೆದಿದೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರಯ, ಹೈಕಮಾಂಡ್‌ನ ಮನವೊಲಿಕೆ ನಂತರವೂ ಅಸ್ಸಾಂ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥ ಭೂಪೇನ್ ಕುಮಾರ್ ಬೋರಾ ಪಕ್ಷ ತೊರೆದು ಬಿಜೆಪಿ ಸೇರಿದ್ದಾರೆ.

ಅಸ್ಸಾಂ ರಾಜ್ಯದ 126 ಸೀಟುಗಳ ವಿಧಾನಸಭೆಗೆ ಏಪ್ರಿಲ್ ತಿಂಗಳಿನಲ್ಲಿ ಚುನಾವಣೆ ನಡೆಯಲಿದೆ. ಮಾರ್ಚ್‌ನಲ್ಲಿ ಕೇಂದ್ರ ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಲಿದೆ. ಅಸ್ಸಾಂ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಕರ್ನಾಟಕದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್.

33 ವರ್ಷಗಳ ಕಾಲ ಕಾರ್ಯ ನಿರ್ವಹಣೆ ಮಾಡಿದ ಪಕ್ಷವನ್ನು ಬಿಟ್ಟು ಅಸ್ಸಾಂ ಕಾಂಗ್ರೆಸ್‌ನ ಮಾಜಿ ಅಧ್ಯಕ್ಷ ಭೂಪೇನ್ ಕುಮಾರ್ ಬೋರಾ ಭಾನುವಾರ ಬಿಜೆಪಿ ಸೇರಿದರು. ಎರಡು ಬಾರಿಯ ಶಾಸಕ ಭೋಪೇನ್ ಕುಮಾರ್ ಬೋರಾ ಅವರನ್ನು ಪಕ್ಷಕ್ಕೆ ಅಸ್ಸಾಂ ಬಿಜೆಪಿ ಅಧ್ಯಕ್ಷ ದಿಲೀಪ್ ಸೈಕಿಯಾ ಬರಮಾಡಿಕೊಂಡರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಫೆಬ್ರವರಿ 16ರಂದು ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದ ಭೂಪೇನ್ ಕುಮಾರ್ ಬೋರಾ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭೇಟಿ ಮಾಡಿದ್ದರು. ಆದರೆ ಹಿಮಂತ ಬಿಸ್ವಾ ಶರ್ಮಾ ತಮ್ಮ ತೀರ್ಮಾನವನ್ನು ಮರು ಪರಿಶೀಲಿಸಿ ಎಂದು ಸಲಹೆ ನೀಡಿದ್ದರು.

ಹೈಕಮಾಂಡ್ ನಾಯಕರ ಮನವೊಲಿಕೆ ಬಳಿಕವೂ ಭೂಪೇನ್ ಕುಮಾರ್ ಬೋರಾ ತಮ್ಮ ರಾಜೀನಾಮೆ ವಾಪಸ್ ಪಡೆದಿರಲಿಲ್ಲ. ಭೂಪೇನ್ ಕುಮಾರ್ ಬೋರಾ ಭಾನುವಾರ ಮಾಜಿ ಶಾಸಕ ಸಂಜು ಬೋರಾ ಜೊತೆ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಇದು ಅಸ್ಸಾಂ ಕಾಂಗ್ರೆಸ್‌ಗೆ ಭಾರೀ ಆಘಾತ ಎಂದು ಬಣ್ಣಿಸಲಾಗುತ್ತಿದೆ. ರಾಜ್ಯದಲ್ಲಿ 29 ಕಾಂಗ್ರೆಸ್ ಶಾಸಕರಿದ್ದಾರೆ. 33 ವರ್ಷ ಕೆಲಸ ಮಾಡಿದ, ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ನಿಭಾಯಿಸಿದ್ದ ಭೂಪೇನ್ ಕುಮಾರ್ ಬೋರಾ ಬಿಜೆಪಿ ಸೇರ್ಪಡೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆ ತರುವ ನಿರೀಕ್ಷೆ ಇದೆ.

 “33 ವರ್ಷಗಳಿಂದ ನಾನು ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಇತ್ತೀಚೆಗೆ ಪಕ್ಷದಲ್ಲಿ ಏನಾಗುತ್ತಿದೆ ಎಂಬುದನ್ನು ಆತ್ಮಾವಲೋಕನ ಮಾಡಿಕೊಂಡ ಬಳಿಕವೇ ನಾನು ರಾಜೀನಾಮೆ ನೀಡಿದ್ದೇನೆ. ಕಾಂಗ್ರೆಸ್ ನಾಯಕರು ನನ್ನ ಭಾವನೆಗಳಿಗೆ ನೋವುಂಟು ಮಾಡಿದ್ದಾರೆ” ಎಂದು ಭೂಪೇನ್ ಕುಮಾರ್ ಬೋರಾ ಹೇಳಿದ್ದಾರೆ.

ಭೂಪೇನ್ ಕುಮಾರ್ ಬೋರಾ ರಾಜೀನಾಮೆ ನೀಡಿದ ಬಳಿಕ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ದೂರವಾಣಿ ಕರೆ ಮಾಡಿ ಅವರ ಜೊತೆ ಮಾತುಕತೆ ನಡೆಸಿದ್ದರು.

ಆದರೆ ಭೂಪೇನ್ ಕುಮಾರ್ ಬೋರಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ಮಾಡುವ ಮೂಲಕ ಬಿಜೆಪಿ ಸೇರುವ ಸುಳಿವು ನೀಡಿದ್ದರು. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭೇಟಿ ಬಳಿಕ ಫೆಬ್ರವರಿ 22ರಂದು ಬಿಜೆಪಿ ಸೇರುವುದಾಗಿ ಘೋಷಣೆ ಮಾಡಿದ್ದರು.

ಭೂಪೇನ್ ಕುಮಾರ್ ಬೋರಾ 2 ಬಾರಿ ಶಾಸಕರಾಗಿದ್ದರು. 2021 ರಿಂದ 2024ರ ತನಕ ಅಸ್ಸಾಂ ರಾಜ್ಯ ಘಟಕದ ಮುಖ್ಯಸ್ಥರಾಗಿ ಕೆಲಸ ಮಾಡಿದ್ದರು. ತರುಣ್ ಗೊಗಾಯ್ ಸರ್ಕಾರದಲ್ಲಿ ಸಂಸದೀಯ ಕಾರ್ಯದರ್ಶಿಯಾಗಿದ್ದರು.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular