BREAKING NEWS: ಅಸ್ಸಾಂನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ: ಗುವಾಹಟಿ ವಿಮಾನ ನಿಲ್ದಾಣಕ್ಕೆ ಹಾನಿ

ಗುವಾಹಟಿ: ಭಾರೀ ಮಳೆಯಿಂದಾಗಿ ಗುವಾಹಟಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಹಲವು ಭಾಗಗಳು ಹಾನಿಗೊಳಗಾಗಿದ್ದು, ವಿಮಾನ ನಿಲ್ದಾಣದ ಬಳಕೆದಾರರು ವಿಡಿಯೋ ಹಂಚಿಕೊಂಡಿದ್ದಾರೆ.

ವಿಮಾನ ನಿಲ್ದಾಣದ ಛಾವಣಿಗೆ ಹಾನಿಯಾಗಿ ನೀರು ಸೋರುತ್ತಿರುವುದು ಸೇರಿ ಮಳೆಯಿಂದಾದ ಅನಾಹುತದ ಚಿತ್ರಗಳು ಮತ್ತು ವೀಡಿಯೊಗಳನ್ನು ಹಂಚಿಕೊಂಡಿದ್ದಾರೆ.

ಗುವಾಹಟಿಯಲ್ಲಿ ಭಾನುವಾರ ಸಂಜೆ ಭಾರಿ ಮಳೆಯಾಗಿದೆ. IMD ಪ್ರಕಾರ, ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಮಿಂಚು, ಗುಡುಗು ಬಿರುಗಾಳಿ ಸಹಿತ ಮಳೆಯಾಗಿದೆ. ಮನೆ, ಕಟ್ಟಡಗಳು, ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ. ಗಂಟೆಗೆ 30 ರಿಂದ 40 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆ ಇದೆ. ತ್ರಿಪುರಾದಂತಹ ಇತರ ಈಶಾನ್ಯ ರಾಜ್ಯಗಳಲ್ಲೂ ಭಾರೀ ಮಳೆಯಾದ ವರದಿಯಾಗಿದೆ.

ಮುಂದಿನ ದಿನಗಳಲ್ಲಿ ಈಶಾನ್ಯ ರಾಜ್ಯಗಳಲ್ಲಿ ಸಾಕಷ್ಟು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಸೈಕ್ಲೋನಿಕ್ ಪರಿಚಲನೆ ಮತ್ತು ಪಶ್ಚಿಮದ ಅಡಚಣೆಯ ಸಂಯೋಜನೆಯಿಂದಾಗಿ, ಉತ್ತರ ಭಾರತದ ಅನೇಕ ರಾಜ್ಯಗಳು ಮಳೆಯಾಗಲಿದೆ.

ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಮತ್ತು ತ್ರಿಪುರಾ ರಾಜ್ಯಗಳು ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಿಂದ ಸಾಧಾರಣ ಮಳೆಗೆ ಸಾಕ್ಷಿಯಾಗಲಿವೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read