ಅಸ್ಸಾಂನ ಶ್ರೀಭೂಮಿ ಜಿಲ್ಲೆಯಲ್ಲಿ ಮಾನಸಿಕ ಅಸ್ವಸ್ಥ ಯುವತಿಯನ್ನು ಜೈಲಿನ ಆವರಣಕ್ಕೆ ಎಳೆದುಕೊಂಡು ಹೋಗಿ ಸಾಮೂಹಿಕ ಅತ್ಯಾಚಾರ ಎಸಗಿದ ಆರೋಪದ ಮೇಲೆ ಇಬ್ಬರು ಜೈಲು ಸಿಬ್ಬಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಶನಿವಾರ ಬೆಳಗಿನ ಜಾವ 1:30 ರ ಸುಮಾರಿಗೆ ಜೈಲಿನ ಆವರಣದಲ್ಲಿ ಈ ಘಟನೆ ನಡೆದಿದ್ದು, ಗಸ್ತು ತಂಡವು ಕಾವಲುಗಾರರನ್ನು ಬಂಧಿಸಿದೆ.
ಹರೇಶ್ವರ ಕಲಿತಾ ಮತ್ತು ಗಜೇಂದ್ರ ಕಲಿತಾ ಎಂದು ಗುರುತಿಸಲಾದ ಆರೋಪಿಗಳು 45 ರಿಂದ 50 ವರ್ಷ ವಯಸ್ಸಿನವರಾಗಿದ್ದು, ಗುವಾಹಟಿಯ ಪಂಜಾಬರಿ ಮತ್ತು ಬೋರಗಾಂವ್ ಪ್ರದೇಶಗಳ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.
ಇಬ್ಬರೂ ಪುರುಷರನ್ನು ಬಂಧಿಸಲಾಗಿದೆ ಮತ್ತು ಹೆಚ್ಚಿನ ತನಿಖೆ ನಡೆಯುತ್ತಿದೆ. ಮಾನಸಿಕ ಅಸ್ವಸ್ಥೆಯಾಗಿರುವ ಯುವತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವಳು ಬೀದಿಯಲ್ಲಿ ಒಬ್ಬಂಟಿಯಾಗಿದ್ದು, ಆರೋಪಿಗಳು ಅದರ ಲಾಭವನ್ನು ಪಡೆದುಕೊಂಡಿದ್ದಾರೆ. ಶೀಘ್ರದಲ್ಲೇ ಇಬ್ಬರು ಪುರುಷರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಶ್ರೀಭೂಮಿಯ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಪ್ರಣಬ್ ಜ್ಯೋತಿ ಕಲಿತಾ ಹೇಳಿದ್ದಾರೆ.