ELECTION BREAKING: ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯ; ಹಾಸನದಲ್ಲಿ ಜೆಡಿಎಸ್ 406 ಮತಗಳ ಮುನ್ನಡೆ

ಬೆಂಗಳೂರು: ಕೋಲಾರದಲ್ಲಿ ಬಿಜೆಪಿಯ ವರ್ತೂರು ಪ್ರಕಾಶ್ ಮುನ್ನಡೆ ಕಾಯ್ದುಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.

ಅರಕಲಗೂಡು ಕ್ಷೇತ್ರದಲ್ಲಿ ಜೆಡಿಎಸ್ ನ ಎ. ಮಂಜು, ಬಬಲೇಶ್ವರದಲ್ಲಿ ಎಂ.ಬಿ. ಪಾಟೀಲ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಆಯನೂರು ಮುನ್ನಡೆ ಕಾಯ್ದುಕೊಂಡಿದ್ದಾರೆ. ನಿಪ್ಪಾಣಿಯಲ್ಲಿ ಬಿಜೆಪಿಯ ಶಶಿಕಲಾ ಜೊಲ್ಲೆ ಮುನ್ನಡೆ ಗಳಿಸಿದ್ದಾರೆ.

ಹಾಸನದಲ್ಲಿ ಮೊದಲ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಮುನ್ನಡೆ ಗಳಿಸಿದ್ದಾರೆ. 406 ಮತಗಳಿಂದ ಜೆಡಿಎಸ್ ಅಭ್ಯರ್ಥಿ ಸ್ವರೂಪ್ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ಹಿನ್ನಡೆ ಗಳಿಸಿದ್ದಾರೆ.

ಪುತ್ತೂರಿನಲ್ಲಿ ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲ ಮುನ್ನಡೆ ಕಾಯ್ದುಕೊಂಡಿದ್ದಾರೆ. ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಸಚಿವ ಮುನಿರತ್ನ 330 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read