BREAKING: ಮುನ್ನಡೆಯಲ್ಲಿ 100 ಸ್ಥಾನ ದಾಟಿದ ಬಿಜೆಪಿ; ಕಾಂಗ್ರೆಸ್ 90, ಜೆಡಿಎಸ್ 25 ಕ್ಷೇತ್ರಗಳಲ್ಲಿ ಲೀಡ್

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಮತ ಎಣಿಕೆ ಆರಂಭವಾಗಿದೆ. ಆರಂಭಿಕ ಸುತ್ತುಗಳಲ್ಲಿ ಬಿಜೆಪಿ ಅಭ್ಯರ್ಥಿಗಳು 101 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಬಿಜೆಪಿ 101, ಜೆಡಿಎಸ್ 25, ಮತ್ತು ಇತರರು 2 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದಾರೆ. 224 ಕ್ಷೇತ್ರಗಳಲ್ಲಿ ಮ್ಯಾಜಿಕ್ ನಂಬರ್ 113 ಗಳಿಸಬೇಕಿದ್ದು, ಬಿಜೆಪಿ ಮುನ್ನಡೆಯಲ್ಲಿ ಶತಕ ದಾಟಿದೆ.

ಚಿಕ್ಕಬಳ್ಳಾಪುರ ಬಿಜೆಪಿ ಅಭ್ಯರ್ಥಿ ಸುಧಾಕರ್ ಅವರಿಗೆ ಹಿನ್ನಡೆಯಾಗಿದೆ. ಯಶವಂತಪುರದಲ್ಲಿ ಎಸ್.ಟಿ. ಸೋಮಶೇಖರ್ ಅವರಿಗೆ ಹಿನ್ನಡೆಯಾಗಿದೆ. ನರಗುಂದದಲ್ಲಿ ಬಿಜೆಪಿಯ ಸಿ.ಸಿ. ಪಾಟೀಲ್ ಅವರಿಗೆ ಹಿನ್ನಡೆಯಾಗಿದೆ. ಚನ್ನಪಟ್ಟಣದಲ್ಲಿ ಹೆಚ್.ಡಿ. ಕುಮಾರಸ್ವಾಮಿ ಅವರಿಗೆ ಹಿನ್ನಡೆಯಾಗಿದ್ದು, ಬೀಳಗಿಯಲ್ಲಿ ಬಿಜೆಪಿಯ ಮುರುಗೇಶ್ ನಿರಾಣಿ, ಹಳಿಯಾಳದಲ್ಲಿ ಆರ್.ವಿ. ದೇಶಪಾಂಡೆ ಅವರಿಗೆ ಹಿನ್ನಡೆಯಾಗಿದೆ.

ಸಚಿವ ಸೋಮಣ್ಣ ಅವರಿಗೆ ವರುಣಾ ಮತ್ತು ಚಾಮರಾಜನಗರ ಕ್ಷೇತ್ರದಲ್ಲಿ ಹಿನ್ನಡೆಯಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read