HomeIndiaBREAKING: ಹರಿಯಾಣದಲ್ಲಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಬಿಗ್ ಶಾಕ್: ‘ಮ್ಯಾಜಿಕ್ ನಂಬರ್’ ದಾಟಿದ ಕಾಂಗ್ರೆಸ್ ಗೆ...

BREAKING: ಹರಿಯಾಣದಲ್ಲಿ ಹ್ಯಾಟ್ರಿಕ್ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಬಿಗ್ ಶಾಕ್: ‘ಮ್ಯಾಜಿಕ್ ನಂಬರ್’ ದಾಟಿದ ಕಾಂಗ್ರೆಸ್ ಗೆ ಭರ್ಜರಿ ಬಹುಮತ

ನವದೆಹಲಿ: ದೇಶದ ಗಮನ ಸೆಳೆದಿದ್ದ ಹರಿಯಾಣ ವಿಧಾನಸಭೆ ಚುನಾವಣೆಯ ಮತ ಎಣಿಕೆ ಕಾರ್ಯ ಆರಂಭವಾಗಿದ್ದು, ಆರಂಭಿಕ ಸುತ್ತುಗಳಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

90 ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಹರಿಯಾಣದಲ್ಲಿ ಬಹುಮತಕ್ಕೆ 46 ಸ್ಥಾನಗಳು ಬೇಕಿದ್ದು, ಕಾಂಗ್ರೆಸ್ ಪಕ್ಷ 51 ಸ್ಥಾನಗಳಲ್ಲಿ ಮುನ್ನಡೆ ಕಾಯ್ದುಕೊಂಡಿದೆ. ಬಿಜೆಪಿ 27 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿದ್ದು, ಐ.ಎನ್.ಎಲ್.ಡಿ. ಎರಡು ಸ್ಥಾನಗಳಲ್ಲಿ ಹಾಗೂ ಇತರರು ಎರಡು ಕ್ಷೇತ್ರಗಳಲ್ಲಿ ಮುನ್ನಡೆ ಗಳಿಸಿದ್ದಾರೆ.

ಹರಿಯಾಣದಲ್ಲಿ ಕಾಂಗ್ರೆಸ್ ಪಕ್ಷ ಮ್ಯಾಜಿಕ್ ನಂಬರ್ ದಾಟಿದೆ. ಸಮೀಕ್ಷೆಗಳಲ್ಲಿಯೂ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಮಧ್ಯಾಹ್ನದೊಳಗೆ ಯಾವ ಪಕ್ಷ ಎಷ್ಟು ಸ್ಥಾನ ಗಳಿಸಿ ಅಧಿಕಾರಕ್ಕೆ ಬರಲಿದೆ ಎನ್ನುವುದರ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಹ್ಯಾಟ್ರಿಕ್ ಗೆಲುವಿನ ನಿರೀಕ್ಷೆಯಲ್ಲಿದ್ದ ಬಿಜೆಪಿಗೆ ಆಡಳಿತ ವಿರೋಧಿ ಅಲೆಯಿಂದ ಹಿನ್ನಡೆಯಾಗಿದೆ ಎನ್ನಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular