HomeKarnatakaಪೊಲೀಸ್ ವರ್ಗಾವಣೆ ಕಾನೂನು ತಿದ್ದುಪಡಿಗೆ ವಿಧಾನಸಭೆ ಸರ್ವಾನುಮತದ ಒಪ್ಪಿಗೆ

ಪೊಲೀಸ್ ವರ್ಗಾವಣೆ ಕಾನೂನು ತಿದ್ದುಪಡಿಗೆ ವಿಧಾನಸಭೆ ಸರ್ವಾನುಮತದ ಒಪ್ಪಿಗೆ

ಬೆಂಗಳೂರು: ಪೊಲೀಸ್ ವರ್ಗಾವಣೆ ಕಾನೂನು ತಿದ್ದುಪಡಿಗೆ ವಿಧಾನಸಭೆಯಲ್ಲಿ ಸೋಮವಾರ ಸರ್ವಾನುಮತದ ಒಪ್ಪಿಗೆ ನೀಡಲಾಗಿದೆ.

ಪೊಲೀಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಲು ನಿಗದಿತ ಕನಿಷ್ಠ ಎರಡು ವರ್ಷಗಳ ಕಾಲಾವಧಿಯಿಂದ ಕೆಲವು ಪ್ರಕರಣಗಳಲ್ಲಿ ವಿನಾಯಿತಿ ನೀಡುವ ಉದ್ದೇಶದ ಕರ್ನಾಟಕ ಪೊಲೀಸ್ ತಿದ್ದುಪಡಿ ವಿಧೇಯಕ -2026 ಕ್ಕೆ ಸೋಮವಾರ ವಿಧಾನಸಭೆಯಲ್ಲಿ ಹೆಚ್ಚಿನ ಚರ್ಚೆ ಇಲ್ಲದೆ ಸರ್ವಾನುಮತದಿಂದ ಒಪ್ಪಿಗೆ ನೀಡಲಾಗಿದೆ.

ಕರ್ತವ್ಯ ಲೋಪ, ದುರ್ನಡತೆ, ನೈತಿಕ ಅಧಃಪತನದ ಕೃತ್ಯ ಎಸಗಿದ ಪೊಲೀಸ್ ಅಧಿಕಾರಿಗಳ ವರ್ಗಾವಣೆಗೆ ಒಂದೇ ಸ್ಥಳದಲ್ಲಿ ಕನಿಷ್ಠ ಎರಡು ವರ್ಷಗಳ ಕಾಲ ಒಂದೇ ಅವಧಿಯಲ್ಲಿ ಸೇವೆ ಸಲ್ಲಿಸಬೇಕು ಎಂಬ ನಿಯಮದಿಂದ ವಿನಾಯಿತಿ ನೀಡಲು ಈ ಕಾನೂನು ತಿದ್ದುಪಡಿ ಮಾಡಲಾಗಿದೆ,

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವಿಧೇಯದ ಬಗ್ಗೆ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಸದನಕ್ಕೆ ವಿವರಣೆ ನೀಡಿ, ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳಿಗೆ ತಮ್ಮ ಕೆಳಗಿನ ಅಧಿಕಾರಿಗಳ ಮೇಲೆ ಹೆಚ್ಚಿನ ಶಿಸ್ತಿನ ನಿಯಂತ್ರಣ ಅಧಿಕಾರ ನೀಡುವುದು ವಿಧೇಯಕದ ಮುಖ್ಯ ಉದ್ದೇಶವಾಗಿದೆ. ಡಿವೈಎಸ್ಪಿ ಶ್ರೇಣಿವರೆಗಿನ ಅಧಿಕಾರಿಗಳು ಕರ್ತವ್ಯ ಲೋಪ, ಅಶಿಸ್ತು ಮತ್ತು ದುರ್ನಡತೆ ತೋರಿದರೆ ಸರ್ಕಾರದ ಪೂರ್ವಾನುಮತಿಗಾಗಿ ಕಾಯದೆ ವರ್ಗಾವಣೆ ಮಾಡುವ ಅಧಿಕಾರವನ್ನು ಪೊಲೀಸ್ ಎಸ್ಟಾಬ್ಲಿಷ್ಮೆಂಟ್ ಬೋರ್ಡ್ ಗೆ ನೀಡಲಾಗುವುದು. ಪೊಲೀಸ್ ಇಲಾಖೆಯಲ್ಲಿ ಪಾರದರ್ಶಕತೆ ತರುವುದು ಮತ್ತು ಭ್ರಷ್ಟಾಚಾರ ತಡೆ ಕೂಡ ಈ ಕಾನೂನು ತಿದ್ದುಪಡಿಯ ಉದ್ದೇಶವಾಗಿದೆ ಎಂದು ಹೇಳಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular