HomeLatest Newsಪ್ರತೀ ಕುಟುಂಬಕ್ಕೆ ಪ್ರತೀ ತಿಂಗಳು 5 ರಿಂದ 6 ಸಾವಿರ ರೂ. ನೆರವು: ಸಿದ್ಧರಾಮಯ್ಯ

ಪ್ರತೀ ಕುಟುಂಬಕ್ಕೆ ಪ್ರತೀ ತಿಂಗಳು 5 ರಿಂದ 6 ಸಾವಿರ ರೂ. ನೆರವು: ಸಿದ್ಧರಾಮಯ್ಯ

ಮೈಸೂರು: ಶೂದ್ರ ಶ್ರಮಿಕ ವರ್ಗಗಳಿಗೆ ಆರ್ಥಿಕ‌ ಚೈತನ್ಯ ಕೊಡಲು ಅಂದು ಭಾಗ್ಯಗಳು, ಇಂದು ಗ್ಯಾರಂಟಿಗಳು ವರದಾನವಾಗಿವೆ. ನಮ್ಮ ಸರ್ಕಾರ ಜಾತಿ ನೋಡಲ್ಲ. ಎಲ್ಲಾ ಜಾತಿಯವರ ಅಭಿವೃದ್ಧಿಯಷ್ಟೆ ನಮ್ಮ ಗುರಿ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

 ಮೈಸೂರಿನಲ್ಲಿ ಆಯೋಜಿಸಿದ್ದ ಭಗೀರಥ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಬಳಿಕ, “ಉಪ್ಪಾರ ಸಮುದಾಯ ಭವನದ” ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈ ನೆಲದ ದಾರ್ಶನಿಕರು, ಮಹಾನುಭಾವರ ಮನುಕುಲದ ಕೊಡುಗೆ ಗಮನಿಸಿ ಅವರೆಲ್ಲರ ಜಯಂತಿಯನ್ನು ಸರ್ಕಾರವೇ ಆಚರಿಸುತ್ತಿದೆ. ಜೊತೆಗೆ ಇವರೆಲ್ಲರೂ ಜಾತ್ಯತೀತ ಮನೋಭಾವದಿಂದ ನೀಡಿದ ಮೌಲ್ಯಗಳ ಆಧಾರದಲ್ಲಿ ಸರ್ಕಾರ ಕಾರ್ಯಕ್ರಮಗಳನ್ನು ರೂಪಿಸುತ್ತದೆ ಎಂದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚತುರ್ವರ್ಣ ವ್ಯವಸ್ಥೆಯ ಅಡಿಯಲ್ಲಿ ಶೂದ್ರರಿಗೆ ಶಿಕ್ಷಣದ ಅವಕಾಶವೇ ಇರಲಿಲ್ಲ. ಇದರಿಂದಾಗಿ ಶೂದ್ರರಿಗೆ ದುಡಿಯುವ ಅವಕಾಶವೇ ಇಲ್ಲದಂತಾಯಿತು. ಶೂದ್ರರಲ್ಲಿ ಉಪ್ಪಾರ ಸಮುದಾಯ ಅತೀ ಹಿಂದುಳಿದ ಸಮುದಾಯವಾಗಿದೆ. ಅಂಬೇಡ್ಕರ್ ಅವರು ನೀಡಿರುವ “ಶಿಕ್ಷಣ-ಸಂಘಟನೆ-ಹೋರಾಟ ಎನ್ನುವ ಮಂತ್ರವನ್ನು ಪಾಲಿಸುವ ಮೂಲಕ ಉಪ್ಪಾರ ಸಮುದಾಯ ಆರ್ಥಿಕವಾಗಿ ಸಬಲರಾಗಬೇಕು. ಈ ಉದ್ದೇಶದಿಂದಲೇ ನಾನು ಉಪ್ಪಾರ ಅಭಿವೃದ್ಧಿ ನಿಗಮ ಸ್ಥಾಪಿಸಿದ್ದು ಎಂದರು.

ಸರ್ವ ಶ್ರಮಿಕ ವರ್ಗವನ್ನು ಗಮನದಲ್ಲಿ ಇಟ್ಟುಕೊಂಡು ಮೊದಲ ಬಾರಿ ಸಿಎಂ ಆದಾಗ ನಾನು ಹತ್ತು ಹಲವು ಭಾಗ್ಯಗಳನ್ನು ಕಲ್ಪಿಸಿದೆ. ಎರಡನೇ ಬಾರಿ ಮುಖ್ಯಮಂತ್ರಿಯಾಗಿ ಐದಕ್ಕೆ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದ್ದರ ಪರಿಣಾಮ ಪ್ರತೀ ಕುಟುಂಬಕ್ಕೆ 5 ರಿಂದ 6 ಸಾವಿರ ರೂಪಾಯಿಯ ನೆರವು ಪ್ರತೀ ತಿಂಗಳು ದೊರೆಯುತ್ತಿದೆ. ಆರ್ಥಿಕ ಅಸಮಾನತೆ ಸುಮ್ಮನೆ ಭಾಷಣ ಮಾಡಿದರೆ ಹೋಗಲ್ಲ. ಕಾರ್ಯಕ್ರಮ ರೂಪಿಸಿ ಜಾರಿಗೆ ತರುವುದು ಮುಖ್ಯ. ಇದಕ್ಕಾಗಿ ನಮ್ಮ ಸರ್ಕಾರ ನಿಂತರವಾಗಿ ಶ್ರಮಿಸುತ್ತಿದೆ ಎಂದು ಹೇಳಿದ್ದಾರೆ.

ಉಪ್ಪಾರ ಸಮುದಾಯದ ಕುಲಶಾಸ್ತೀಯ ಅಧ್ಯಯನದ ಆಧಾರದಲ್ಲಿ ಮುಂದಿನ‌ ಕ್ರಮ ವಹಿಸಲಾಗುವುದು. ಉಪ್ಪಾರ ಭವನ‌ಗಳಿಗೆ ಹಣ ಒದಗಿಸಲಾಗುವುದು.‌ ಆದರೆ, ನೀವು ಕೂಡ ನಿಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಿಕ್ಷಿತರನ್ನಾಗಿ ಮಾಡುತ್ತೇವೆ ಎನ್ನುವ ಶಪಥ ಮಾಡಬೇಕು. ನಾವು ನಿಮ್ಮ ಜೊತೆ ಗಟ್ಟಿಯಾಗಿ ನಿಂತಿದ್ದೇವೆ, ನೀವು ನಮ್ಮ ಜೊತೆ ಭದ್ರವಾಗಿ‌ ನಿಲ್ಲಿ. ಬದಲಾವಣೆ ಖಂಡಿತವಾಗಿ ಬರಲಿದೆ ಎಂದು ಹೇಳಿದ್ದಾರೆ.

ಉಪ್ಪಾರ ಜನಾಂಗವನ್ನು ಎಸ್.ಟಿ. ವರ್ಗಕ್ಕೆ ಸೇರ್ಪಡೆಗೆ ಸರ್ಕಾರ ತೀರ್ಮಾನಿಸಿದೆ. ಉಪ್ಪಾರ ಸಮುದಾಯವನ್ನು ಪರಿಶಿಷ್ಟ ವರ್ಗಕ್ಕೆ ಸೇರ್ಪಡೆಗೊಳಿಸಲು ಈಗಾಗಲೇ ಕುಲಶಾಸ್ತ್ರೀಯ ಅಧ್ಯಯನ ನಡೆಸಿ ವರದಿ ಕೂಡ ಸಲ್ಲಿಸಲಾಗಿದೆ. ವರದಿಯನ್ನು ಸದನದಲ್ಲಿ ಚರ್ಚಿಸಿ ಕೇಂದ್ರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದ್ದಾರೆ.

ಶಾಸಕ ಪುಟ್ಟರಂಗಶೆಟ್ಟಿ, ವಿಧಾನ ಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ಮಾತನಾಡಿದರು. ಶ್ರೀ ಪುರುಷೋತ್ತಮಾನಂದ ಪುರಿ ಸ್ವಾಮೀಜಿ ಆಶೀರ್ವಚನ ನೀಡಿದರು. ಪಶು ಸಂಗೋಪನೆ ಸಚಿವ ಕೆ. ವೆಂಕಟೇಶ್, ಶಾಸಕರಾದ ಗಣೇಶ್ ಪ್ರಸಾದ್, ಅನಿಲ್ ಚಿಕ್ಕಮಾದು, ಎ.ಆರ್. ಕೃಷ್ಣಮೂರ್ತಿ, ಡಿ. ತಿಮ್ಮಯ್ಯ ಸೇರಿದಂತೆ ಹಲವರು ಇದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular